Featured

ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ  ಶ್ಲಾಘನೀಯ : ರಮೇಶ್ ಕಾಂಚನ್ – vishwanews24

ಉಡುಪಿ: ಕರಾವಳಿ ಜನತೆಯ ಮೇಲೆ ಡಿ ಕೆ ಶಿ ತೋರಿರುವ ವಿಶೇಷ ಕಾಳಜಿ  ಶ್ಲಾಘನೀಯ : ರಮೇಶ್ ಕಾಂಚನ್

ಉಡುಪಿ: ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸ ನೀತಿಯನ್ನು ರೂಪಿಸುವ ಚಿಂತನೆ ಹಾಗೂ ತುಳುನಾಡಿನ ಆಚರಣೆಗಳಾದ ದೈವ ಕೋಲ, ನೇಮೋತ್ಸವ, ಯಕ್ಷಗಾನಗಳನ್ನು ನಡೆಸಲು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕರಾವಳಿ ಜನತೆಯ ಮೇಲೆ ತೋರಿರುವ ವಿಶೇಷ ಕಾಳಜಿಯನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಶ್ಲಾಘಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಳೆದ ಭಾನುವಾರದಂದು ಉಡುಪಿ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಕರಾವಳಿಯಲ್ಲಿ ನಡೆಯುವ ದೈವ ಕೋಲ, ನೇಮೋತ್ಸವ,ಯಕ್ಷಗಾನ ಹಾಗೂ ಕೋಳಿ ಅಂಕದ ವಿಚಾರದಲ್ಲಿ ಜಿಲ್ಲಾಡಳಿತದ ಕಠಿಣ ನಿಯಮದಿಂದ ಸಮಸ್ಯೆ ಉಂಟಾಗುತ್ತಿರುವ ಕುರಿತು ಗಮನ ಸೆಳೆಯಲಾಗಿತ್ತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಅಂದು ನೀಡಿದ್ದರು. ಅದರಂತೆ ಮಂಗಳವಾರ ವಿಧಾನಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿರುವುದು ಅವರ ಜನಪರ ಕಾಳಜಿಯ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ರಾಜ್ಯದಲ್ಲಿಯೇ ಅತಿ ಹೆಚ್ಚು ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆಗಳು, ಪ್ರವಾಸಿ ತಾಣಗಳು, ಉದ್ದಿಮೆ ಹಾಗೂ ಧಾರ್ಮಿಕ ಕೇಂದ್ರಗಳು ರಾಜ್ಯ ಕರಾವಳಿಯ ದ.ಕ ಹಾಗೂ ಉಡುಪಿ ಭಾಗದಲ್ಲಿ ಇದ್ದು. ಬಹುದೊಡ್ಡ ಆರ್ಥಿಕ ಕೇಂದ್ರವಾಗಿಯೂ ಬೆಳೆಯುವ ನಗರಗಳಲ್ಲಿ ಮುಂಚೂಣಿ ಸ್ಥಾನದಲ್ಲಿದೆ, ಆದರೆ ಇತ್ತೀಚಿನ ದಿನಗಳಲ್ಲಿ ಕರಾವಳಿಗೆ ವಿದೇಶಗಳಿಂದ ಮತ್ತು ಹೊರ ರಾಜ್ಯಗಳಿಂದ ಬರುತ್ತಿರುವ ವಿದ್ಯಾರ್ಥಿಗಳ ಹಾಗೂ ಉದ್ದಿಮೆದಾರರ ಮತ್ತು ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದ್ದು ಮೂಲಭೂತ ಸೌಕರ್ಯ ಹಾಗೂ ಭದ್ರತೆಯ ಕಾರಣದಿಂದ ಕರಾವಳಿ ಅಭಿವೃದ್ಧಿ ಕುಂಠಿತಗೊಳ್ಳುತ್ತಿದ್ದು ಇದರ ಕುರಿತು ಕರಾವಳಿ ಭಾಗದ ಶಾಸಕರು ಸೂಕ್ತವಾಗಿ ಗಮನಿಸಿ, ಒಳ್ಳೆಯ ನಿರ್ಧಾರವನ್ನು ಮಾಡಬೇಕು ಎಂದು ಸೂಚಿಸಿ ಕರಾವಳಿಯ ಅಭಿವೃದ್ಧಿಗೆ ಪ್ರತ್ಯೇಕ ಸಭೆ ನಡೆಸುವ ಭರವಸೆಯನ್ನು ಕೂಡ ನೀಡಿದ್ದಾರೆ. ಇದರೊಂದಿಗೆ ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ಕೂಡ ರೂಪಿಸುವ ಚಿಂತನೆ ನಡೆಸಿದ್ದಾರೆ. ಈ ಮೂಲಕ ಕರಾವಳಿಯ ಅಭಿವೃದ್ಧಿಗೆ ಉತ್ತಮ ಚಿಂತನೆ ಮಾಡುತ್ತಿರುವ ರಾಜ್ಯದ ಉಪ ಮುಖ್ಯಮಂತ್ರಿಗಳ ನಡೆ ಕರಾವಳಿ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 minutes ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

25 minutes ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

42 minutes ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

51 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

1 hour ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

2 hours ago