Featured

ಉಡುಪಿ : ಕರಾವಳಿ ಭಾಗದಲ್ಲಿ ಸೇನೆಗೆ ಇಚ್ಚಿಸುವವರಿಗಾಗಿ ಸೇನಾ ಆಯ್ಕೆ ಶಾಲೆ : ಕೋಟಾ ಶ್ರೀನಿವಾಸ ಪೂಜಾರಿ – Vishwnaews24

ಉಡುಪಿ : ಕರಾವಳಿ ಭಾಗದಲ್ಲಿ ಸೇನೆಗೆ ಇಚ್ಚಿಸುವವರಿಗಾಗಿ ಸೇನಾ ಆಯ್ಕೆ ಶಾಲೆ : ಕೋಟಾ ಶ್ರೀನಿವಾಸ ಪೂಜಾರಿ – Vishwnaews24

ಉಡುಪಿ : ಕರಾವಳಿ ಭಾಗದಲ್ಲಿ ಸೇನೆಗೆ ಸೇರಲು ಇಚ್ಚಿಸುವವರಿಗಾಗಿ ಉಡುಪಿ, ದ.ಕ ಹಾಗೂ ಉತ್ತರ ಕನ್ನಡದಲ್ಲಿ ಸೇನಾ ಆಯ್ಕೆ ಶಾಲೆಗಳನ್ನು ತೆಗೆಯಲಾಗುವುದು ಎಂದು ಹಿಂದುಳಿದ ವರ್ಗ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಸೇನೆಗೆ ಸೇರುವ ಆಸಕ್ತರಿಗಾಗಿ ಉಡುಪಿಯಲ್ಲಿ ಸ್ಥಾಪಿಸುವ ಸಂಸ್ಥೆಗೆ ಕೋಟಿ ಚೆನ್ನಯ್ಯ ಸೇನಾ ಆಯ್ಕೆ ಸಂಸ್ಥೆ, ದ.ಕ ಜಿಲ್ಲೆಯಲ್ಲಿ ರಾಣಿ ಅಬ್ಬಕ್ಕ ಸೇನಾ ಆಯ್ಕೆ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹಿಂಜಾ ನಾಯ್ಕ್ ಸೇನಾ ಆಯ್ಕೆ ಸಂಸ್ಥೆ ಎಂಬ ಹೆಸರಿನಲ್ಲಿ ಮೂರು ಸೇನಾ ತರಬೇತಿ ಶಾಲೆಗಳನ್ನು ತೆರೆಯಲಾಗುವುದು ಎಂದರು.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಜನಪರ ಕಾರ್ಯಕ್ರಮ ಗಳ ಬಗ್ಗೆ ಮಾಹಿತಿ ನೀಡಿದ ಅವರು, ಕೇಂದ್ರ ಸರಕಾರ 8 ವರ್ಷಗಳಲ್ಲಿ‌ ಸೇವಾ ಸುಶಾಸನ, ಬಡವರ ಕಲ್ಯಾಣ ,ಸೇವಾ ಯೋಜನೆ ಅಡಿಯಲ್ಲಿ ಅನೇಕ ಜನಪರ ಕಾರ್ಯಕ್ರಮ ಗಳನ್ನು ಹಮ್ಮಿ ಕೊಂಡಿತು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ನಿರ್ವಹಣೆ, ಅಭಿವೃದ್ಧಿ ಕಾರ್ಯಗಳು, ಸಾರ್ವಜನಿಕ ಸೇವೆಗಳು ಬಡವರಿಗಾಗಿ ರೂಪಿಸಿದ ಹತ್ತಾರು ಯೋಜನೆಗಳು ಬಿಜೆಪಿ ಕಾರ್ಯ ಕರ್ತರಿಗೆ ಹೆಮ್ಮೆ ಪಡುವಂತಹದ್ದಾಗಿದೆ ಎಂದರು.

ಕೇಂದ್ರ ಸರಕಾರ ರಾಜ್ಯದ ಅಭಿವೃದ್ಧಿಗೆ 1,29,776 ಕೋ ರೂ. ಅನುದಾನ ಮಂಜೂರು ಮಾಡಿತ್ತು. ಸುಮಾರು1.15 ಲಕ್ಷ ಕೋಟಿ ರೂ.ಗಳನ್ನು ವಿಮಾ ಯೋಜನೆ ಅಡಿಯಲ್ಲಿ ದೇಶದ ರೈತರು ಪಡೆದಿದ್ದಾರೆ. ರೈತರ ಬೆಲೆ ಸಾಗಾಣಿಕೆ ಗಾಗಿ ವಿಶೇಷ ರೈಲು ಸೇವೆ ನೀಡಲಾಗಿದೆ.

ಇದೇ ವೇಳೆ ಅವರು, ಇಂಧನ ಬೆಲೆ ಹೆಚ್ಚಾದಾಗ ಟೀಕೆ ಮಾಡುವವರು ಬೆಲೆ ಕಡಿಮೆ ಅದಾಗ ಸ್ವಾಗತ ಮಾಡುವುದಿಲ್ಲ ಎಂಬ ಆತಂಕ ವಿದೆ. ಬೆಲೆ ಏರಿಕೆ – ಇಳಿಕೆ ಸ್ವಾಭಾವಿಕ ವಾಗಿದ್ದು ಬೆಲೆಗಳನ್ನು ನಿಯಂತ್ರಣ ಮಾಡುವುದು ಸರಕಾರದ ಜವಾಬ್ದಾರಿ ಅದನ್ನು ಸರಕಾರ ಮಾಡುತ್ತದೆ ಎಂದರು. ಇದೇ ವೇಳೆ ಕಾರ್ಕಳದ ಬೋಳ ಗ್ರಾಮ ಪಂಚಾಯತ್ ನಲ್ಲಿ ನಾಥೂರಾಮ್ ಗೋಡ್ಸೆ ಹೆಸರಿನ ನಾಮ ಫಲಕ ಅಳವಡಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಇದು ಸರಕಾರದ ವೈಫಲ್ಯ ಅಲ್ಲ. ಅನಾಗರಿಕತೆ, ಹೇಡಿತನದ ಹೇಯ ಕೃತ್ಯ ಎಂದರು. ಹಾಗೂ ಇದಕ್ಕೂ ಸರಕಾರಕ್ಕೂ ಯಾವುದೇ ಸಂಬಂಧವಿಲ್ಲ ಅದನ್ನು ತೆರವುಗೊಳಿಸಲಾಗಿದೆ ಎಂದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago