Featured

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ – 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ – vishwanews24

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರ – 80 ಪೊಲೀಸ್‌ ಸಿಬಂದಿ ಅಮಾನತು; ಎಸ್‌ಪಿ ಕಟ್ಟುನಿಟ್ಟಿನ ಕ್ರಮ

ಉಡುಪಿ: ಕರ್ತವ್ಯಲೋಪ ಹಾಗೂ ಭ್ರಷ್ಟಾಚಾರದ ವಿರುದ್ಧ ಜಿಲ್ಲಾ ಪೊಲೀಸ್‌ ಇಲಾಖೆ ಕಠಿನ ಕ್ರಮಕ್ಕೆ ಮುಂದಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿ ಒಂದು ವರ್ಷದಲ್ಲಿ 4 ಮಂದಿ ಎಸ್‌ಐಗಳು ಸಹಿತ 80ಕ್ಕೂ ಅಧಿಕ ಸಿಬಂದಿ ಅಮಾನತುಗೊಂಡಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ಪೊಲೀಸರು ಅಮಾನತುಗೊಳ್ಳುತ್ತಿರುವುದು ಇದೇ ಮೊದಲು..

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿ 1 ವರ್ಷ ಪೂರೈಸಿರುವ ಡಾ| ಅರುಣ್‌ ಕೆ. ಅವರು ಪೊಲೀಸರ ಕರ್ತವ್ಯದ ಬಗ್ಗೆ ಗಮನಹರಿಸುತ್ತಿದ್ದು, ಒಂದು ವರ್ಷದಿಂದಲೂ ವಿವಿಧ ಕಾರಣಗಳಿಂದ ಕರ್ತವ್ಯಲೋಪ ಮಾಡಿದವರಿಗೆ ಅಮಾನತು, ವರ್ಗಾವಣೆ ಶಿಕ್ಷೆ ನೀಡಲಾಗಿದೆ.

 

4 ಮಂದಿ ಎಸ್‌ಐಗಳು
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯದಲ್ಲಿದ್ದ 4 ಮಂದಿ ಎಸ್‌ಐಗಳ ಪೈಕಿ ಕೆಲವರ ಅಮಾನತು ಆದೇಶ ಮುಗಿದಿದ್ದು, ಹಿಂದೆ ಸೇವೆ ಸಲ್ಲಿಸುತ್ತಿದ್ದ ಠಾಣೆ ಬಿಟ್ಟು ಬೇರೆ ಠಾಣೆಗಳಲ್ಲಿ ಕರ್ತವ್ಯ ಸಲ್ಲಿಸುತ್ತಿದ್ದಾರೆ. ಅಕ್ರಮ ಮರಳು ಸಾಗಾಟಗಾರರೊಂದಿಗೆ ಶಾಮೀಲಾಗಿರುವುದು, ಲಂಚ ಪಡೆದಿ ರುವುದು, ಮಾನವೀಯ ನೆಲೆಯಲ್ಲಿ ಸಹಾಯ ಮಾಡಲು ಹೋಗಿ ಕಾನೂನು ಸುಳಿಯಲ್ಲಿ ಸಿಲುಕಿರುವುದು ಮುಂತಾದವು ಎಸ್‌ಐಗಳ ಅಮಾನತಿಗೆ ಕಾರಣಗಳು.

ಶಿಕ್ಷೆ ಹೇಗೆ ?
ಪೊಲೀಸರ ವಿರುದ್ಧ ಭ್ರಷ್ಟಾಚಾರ ಸಹಿತ ವಿವಿಧ ಆರೋಪಗಳು ಬಂದಾಗ ಸಾರ್ವಜನಿಕರು ಎಸ್‌ಪಿ ಅವರ ಗಮನಕ್ಕೆ ತರಬಹುದು. ಎಸ್‌ಐಗಳ ಮೇಲೆ ಆರೋಪ ಬಂದಾಗ ಅವರು ಸರ್ಕಲ್‌ ಇನ್‌ಸ್ಪೆಕ್ಟರ್‌ಗೆ ಮಾಹಿತಿ ನೀಡಿ ವರದಿ ನೀಡುವಂತೆ ಸೂಚಿಸುತ್ತಿದ್ದು, ಆಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಾನ್‌ಸ್ಟೆಬಲ್‌ಗ‌ಳ ವಿರುದ್ಧ ಆರೋಪ ಬಂದಾಗ ಎಸ್‌ಐಗಳು ಹಾಗೂ ಇನ್‌ಸ್ಪೆಕ್ಟರ್‌ಗಳ ವಿರುದ್ಧ ಆರೋಪ ಬಂದಲ್ಲಿ ಡಿವೈಎಸ್‌ಪಿ ವರದಿ ನೀಡಬೇಕು.

 

ಕೆಲವರಿಂದಾಗಿ ಜಿಲ್ಲೆಗೂ ಕೆಟ್ಟ ಹೆಸರು
ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ನಡೆಯುವ ಅನೈತಿಕ ಚಟುವಟಿಕೆ, ಮಟ್ಕಾ, ಜುಗಾರಿ, ವೇಶ್ಯಾವಾಟಿಕೆ, ಅಕ್ರಮ ಮರಳುಗಾರಿಕೆ ಪೊಲೀಸರಿಗೆ ತಿಳಿದಿದ್ದರೂ ಎಗ್ಗಿಲ್ಲದೆ ನಡೆಯುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ದಂಧೆಕೋರರಿಗೆ ಪೊಲೀಸರೇ ಸಹಕಾರ ನೀಡಿದರೆ ಜಿಲ್ಲೆಗೂ ಕಪ್ಪು ಚುಕ್ಕೆಯಾಗುತ್ತದೆ. ಈ ಕಾರಣಕ್ಕೆ ಮೂಲದಲ್ಲೇ ಈ ಸಮಸ್ಯೆಯನ್ನು ಹೋಗಲಾಡಿಸಲು ಅಮಾನತು ಮಾಡಲಾಗುತ್ತಿದೆ. ಸಣ್ಣಪುಟ್ಟ ತಪ್ಪಿನಿಂದಾಗಿ ಅಮಾನತುಗೊಂಡವರು ಪಶ್ಚಾತ್ತಾಪ ಪಟ್ಟದ್ದೂ ಇದೆ. ಇಂತಹ ಪ್ರಕರಣದ ನೈಜತೆ ಪರಿಶೀಲಿಸಿ ಅವರನ್ನು ಮತ್ತೆ ಕರ್ತವ್ಯಕ್ಕೆ ನಿಯೋಜಿಸಿದ್ದೂ ಇದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago