ಉಡುಪಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗುವ ಬೂತ್ ಮಟ್ಟದ ಅಧಿಕಾರಿಗಳ ವಿರುದ್ಧ ಜಿಲ್ಲಾಡಳಿತಕ್ಕೆ ದೂರು ಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಎಚ್ಚರಿಸಿದ್ದಾರೆ.
ಉಡುಪಿ ಪ್ರೆಸ್ ಕ್ಲಬ್‌ನಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪ್ರೆಸ್ ಕ್ಲಬ್ ಸಮಿತಿಯಿಂದ ಆಯೋಜಿಸಿದ್ದ ಮಾಸಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದನ್ನೂ ಓದಿ:
* ಆಗಸ್ಟ್ 5 ರಂದು ಮತದಾರರ ಕರಡು ಪಟ್ಟಿ ಪ್ರಕಟವಾಗಲಿದ್ದು, ಪಟ್ಟಿಯಲ್ಲಿ ಹೆಸರು ಇಲ್ಲದವರು ಮಾತ್ರ 11 ಮಾನ್ಯ ದಾಖಲೆಗಳ ಪೈಕಿ ಒಂದನ್ನು ಸಲ್ಲಿಸಬೇಕು. ಈಗಾಗಲೇ ಪಟ್ಟಿಯಲ್ಲಿ ಹೆಸರು ಇರುವವರು ಯಾವುದೇ ದಾಖಲೆ ಸಲ್ಲಿಸುವ ಅಗತ್ಯವಿಲ್ಲ.
* ಬಿಎಲ್‌ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಪದೇಪದೇ ಸೂಚಿಸಲಾಗಿದೆ. ಕೆಲಸದಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ.
* ಕರಡು ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ, ಸ್ವೀಕೃತಿ ಪ್ರತಿ ಬಳಸಿ ಮತ್ತೊಂದು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಇದನ್ನೂ ಓದಿ:
* ಸಾರ್ವಜನಿಕರು ಬೂತ್ ಮಟ್ಟದ ಅಧಿಕಾರಿಗಳ ಕುರಿತು ದೂರು ನೀಡಲು ತಾಲೂಕು ಮಟ್ಟದ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಅಥವಾ ತಹಶೀಲ್ದಾರ್ ಅವರನ್ನು ಸಂಪರ್ಕಿಸಬಹುದು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…