ಉಡುಪಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದು, ಕರ್ನಾಟಕದಲ್ಲೂ ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಹಕಾರಿ ಹಾಗೂ ಈಶಾನ್ಯ ರಾಜ್ಯ ಅಭಿವೃದ್ಧಿ ರಾಜ್ಯ ಖಾತೆ ಸಚಿವ ಬಿ.ಎಲ್. ವರ್ಮ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳ ವಾರ ಅವರು ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರುವ ಮೊದಲು ಕಾಂಗ್ರೆಸ್ ಲಕ್ಷಾಂತರ ಕೋಟಿ ರೂ.ಗಳನ್ನು ಲೂಟಿ ಮಾಡಿತ್ತು. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ನಿಯಂತ್ರಣದ ಸವಾಲವನ್ನು ಸಮರ್ಥವಾಗಿ ಎದುರಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಕರ್ನಾಟಕಕ್ಕೂ ಹಲವು ಕೊಡುಗೆಗಳನ್ನು ನೀಡಿ ದ್ದಾರೆ ಎಂದರು.
ರಾಜ್ಯ ಬಿಜೆಪಿ ಸರ ಕಾರವು ಉಡುಪಿಗೂ ವಿಶೇಷ ಕೊಡುಗೆಗಳನ್ನು ನೀಡಿದ್ದು, ಪ್ರಗತಿಗಾಗಿ ಜಿಲ್ಲೆಯ ಐದು ಕ್ಷೇತ್ರ ಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಪೂರ್ಣ ಪ್ರಮಾಣದಲ್ಲಿ ಜಯ ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಸಹ ವಕ್ತಾರ ಪ್ರತಾಪ್ ಶೆಟ್ಟಿ ಚೇರ್ಕಾಡಿ ಮತ್ತಿತರರು ಉಪಸ್ಥಿತರಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…