Featured

ಉಡುಪಿ : ಕರ್ನಾಟಕದಲ್ಲೂ ಬುಲ್ಡೋಜರ್ ಕಾನೂನು ಶೀಘ್ರ ಜಾರಿಗೆ ಬರುವಂತಾಗಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ -Vishwanews24

ಉಡುಪಿ : ಕರ್ನಾಟಕದಲ್ಲೂ ಬುಲ್ಡೋಜರ್ ಕಾನೂನು ಶೀಘ್ರ ಜಾರಿಗೆ ಬರುವಂತಾಗಲಿ : ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ -Vishwanews24

ಉಡುಪಿ: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಕೆಜೆ ಹಳ್ಳಿ ಡಿಜೆ ಹಳ್ಳಿ ಮಾದರಿಯಲ್ಲಿ ನಡೆದ ಗಲಭೆಯ ರೂವಾರಿ ಯಾರು? ತಪ್ಪಿತಸ್ಥ ಸಮಾಜ ಕಂಟಕರು ಯಾರು? ದಾಂಧಲೆಯ ಹಿಂದೆ ವ್ಯವಸ್ಥಿತ ಪಿತೂರಿ ನಡೆಸಿದವರು ಯಾರು? ಎಂಬೆಲ್ಲಾ ವಿಚಾರಗಳನ್ನು ರಾಜ್ಯದ ಜನತೆ ಚೆನ್ನಾಗಿಯೇ ಅರಿತುಕೊಂಡಿದ್ದಾರೆ.

ಪದೇ ಪದೇ ಉದ್ದೇಶಪೂರ್ವಕ ಗಲಭೆಗಳನ್ನು ಸೃಷ್ಟಿಸಿ ಸಾಮಾಜಿಕ ಶಾಂತಿ ಸುವ್ಯವಸ್ಥೆಯನ್ನು ಹಾಳುಗೆಡಹಿ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ನಷ್ಟವನ್ನುಂಟುಮಾಡುತ್ತಿರುವ ದೇಶದ್ರೋಹಿ ಸಮಾಜ ಕಂಟಕರ ಆಸ್ತಿಯನ್ನು ಮುಟ್ಟುಗೋಲು ಹಾಕಿ ಗಲಭೆ ನಿಯಂತ್ರಿಸಲು ಉತ್ತರ ಪ್ರದೇಶ, ಗುಜರಾತ್, ಮಧ್ಯಪ್ರದೇಶ ಮಾದರಿಯಂತೆ ಕರ್ನಾಟಕದಲ್ಲೂ ಬುಲ್ಲೋಜರ್ ಕಾನೂನು ಶೀಘ್ರ ಜಾರಿಗೆ ಬರುವಂತಾಗಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.

ಸದಾ ಒಂದೇ ವರ್ಗದ ಓಲೈಕೆಯಲ್ಲಿ ನಿರತರಾಗಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಈ ವಿಚಾರದಲ್ಲಿ ವಿಚಲಿತರಾಗಿದ್ದು ತೀವ್ರ ಆತಂಕಕ್ಕೊಳಗಾದಂತೆ ವರ್ತಿಸುತ್ತಿರುವುದು ವಿಪರ್ಯಾಸ. ತನ್ನ ಜೀವಿತಾವಧಿಯಲ್ಲಿ ಒಂದೇ ಒಂದು ಹಿಂದೂ ಪರ ಹೇಳಿಕೆ ನೀಡದ ಹಿಂದೂ ವಿರೋಧಿ ಮನಸ್ಥಿತಿಯ ಮಾಜಿ ಸಿ.ಎಂ. ಸಿದ್ಧರಾಮಯ್ಯ ಆರ್‌ಎಸ್‌ಎಸ್ ದೇಶಭಕ್ತ ಸೇವಾ ಸಂಘಟನೆಯನ್ನು ಮೂಲಭೂತವಾಧಿ ದೇಶದ್ರೋಹಿ ಸಂಘಟನೆಗಳ ಜೊತೆ ಹೋಲಿಕೆ ಮಾಡುವ ಮೂಲಕ ತನ್ನ ಬೌದ್ಧಿಕ ದಿವಾಳಿತನ ಹಾಗೂ ಮೂರ್ಖತನದ ಪರಮಾವಧಿಯನ್ನು ಪ್ರದರ್ಶಿಸಿದ್ದಾರೆ ಎಂದು ಕುಯಿಲಾಡಿ ತಿಳಿಸಿದ್ದಾರೆ.

ದುರಾಡಳಿತ ಮತ್ತು ಹಗರಣಗಳ ಸರಮಾಲೆಯೊಂದಿಗೆ ನಿರಂತರ ಸೋಲಿನಿಂದ ಕಂಗೆಟ್ಟು ತೀವ್ರ ಅಧ:ಪತನದಲ್ಲಿರುವ ಕಾಂಗ್ರೆಸ್ ದೇಶ ವಿರೋಧಿಗಳನ್ನು ಬೆಂಬಲಿಸುತ್ತಾ, ರಾಜ್ಯದೆಲ್ಲೆಡೆ ಅರಾಜಕತೆ ಸೃಷ್ಟಿಸಲು ಹವಣಿಸುತ್ತಿರುವ ಕುಕೃತ್ಯವನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದು ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

8 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

8 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

8 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

9 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago