Featured

ಉಡುಪಿ ಕರ್ನಾಟಕದಲ್ಲೇ ನಂಬರ್‌ 1 ಪ್ರವಾಸಿ ತಾಣವಾಗಿ ಮಲ್ಪೆ ಒಂದು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಿಂಚಬೇಕು  : ಬೊಮ್ಮಾಯಿ -Vishwanews24

ಉಡುಪಿ ಕರ್ನಾಟಕದಲ್ಲೇ ನಂಬರ್‌ 1 ಪ್ರವಾಸಿ ತಾಣವಾಗಿ ಮಲ್ಪೆ ಒಂದು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಿಂಚಬೇಕು  : ಬೊಮ್ಮಾಯಿ -Vishwanews24

ಉಡುಪಿ‌,:,”ಗೋವಾ ಪ್ರವಾಸೋದ್ಯಮದಲ್ಲಿ ಸಾಕಷ್ಟು ಅಭಿವೃದ್ಧಿ ಪಡೆದಿದೆ. ಆದರೆ ಅಲ್ಲಿಯ ಸಿಆರ್‌‌ಜಡ್ ನಿಯಮಕ್ಕೂ ಇಲ್ಲಿಗೂ ಬಹಳಷ್ಟು ವ್ಯತ್ಯಾಸವಿದೆ. ಅದೇ ರೀತಿ ಕರ್ನಾಟಕದಲ್ಲೂ ನಿಯಮ ಸಡಿಲೀಕರಣ ಕೊಳ್ಳಲಿದೆ.‌ಇದು ಎರಡು ಮೂರು ದಶಕಗಳ ಕನಸು. ಮೋದಿ ಪ್ರಧಾನಿ ಆದ ನಂತರ ಗೋವಾ ಮಾದರಿಯಲ್ಲಿ ಸಿಆರ್‌ಜಡ್ ಜಾರಿ ಗೊಳ್ಳುವಂತೆ ಕರಡು ಕೂಡ ಸಿದ್ದವಾಗಿದೆ. ಕೆಲವೇ ತಿಂಗಳಲ್ಲಿ ಅದು ಅನುಷ್ಠಾನವಾಗುವ ಭರವಸೆ ಇದೆ” ಎಂದು ಗೃಹ ಸಚಿವ ಬಸವರಾಜು ಬೊಮ್ಮಾಯಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಗುರುವಾರ ಡಿಸೆಂಬರ್ 3 ರಂದು, 3 ಕೋಟಿ. ರೂ ವೆಚ್ಚದಲ್ಲಿ ಮಲ್ಪೆ ಕಡಲ ಕಿನಾರೆಯ ಸೀ ವಾಕ್ ಬಳಿ ನಿರ್ಮಿಸಲಾದ ಬಯಲು ರಂಗಮಂದಿರ ಹಾಗೂ ಉದ್ಯಾನವನವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಉಡುಪಿ – ಮಲ್ಪೆ ರಸ್ತೆ ಅಗಲೀಕರಿಸಲು ರೂ 91 ಕೋಟಿ ಅನುದಾನ ಬಿಡುಗಡೆಯಾಗಿದ್ದು ತಕ್ಷಣವೇ ಕಾಮಗಾರಿ ಆರಂಭಗೊಳ್ಳಲಿದೆ ಎಂದರು. ಮುಂದಿನ ಡಿಸೆಂಬರ್ ಒಳಗೆ ಕಾಮಗಾರಿ ಸಂಪೂರ್ಣ ವಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸಣ್ಣ ಸಣ್ಣ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಗೆ ಪ್ರಸ್ತಾವನೆ ಕಳುಹಿಸುವಂತೆ ಡಿಸಿಗೆ ಹೇಳಿದ್ದೇನೆ” ಎಂದರು.

“ಮಲ್ಪೆ-ಪಡುಕೆರೆ ಭಾಗದಲ್ಲಿ ಮರಿನಾ ನಿರ್ಮಾಣದ ಯೋಜನೆಯ ಡಿಪಿಆರ್ ತಯಾರಿಸಲು ರೂ. 1.00 ಕೋಟಿ ವೆಚ್ಚವಾಗಲಿದೆ. ತಕ್ಷಣದಲ್ಲಿ ಅನುದಾನ ಮಂಜೂರುಗೊಳಿಸಿ ಡಿ. ಪಿ. ಆರ್ ತಯಾರಿಸಲು ಸೂಚಿಸಿ ನಂತರ ಯೋಜನೆಯ ಅನುಷ್ಠಾನಕ್ಕೆ ಅನುದಾನಕ್ಕೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದ ಅವರು ಉಡುಪಿ ಜಿಲ್ಲೆಯಲ್ಲಿ ಸಮಗ್ರ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಉಡುಪಿಯ ಪ್ರವಾಸಿ ತಾಣಗಳನ್ನು, ಪುಣ್ಯ ಕ್ಷೇತ್ರಗಳನ್ನು ಸೇರಿಸಿ ಲೋಗೋ ಸಿದ್ಧಪಡಿಸಿ, ಟಾಸ್ಕ್ ಫೋರ್ಸ್ ಸಕ್ರಿಯಗೊಳಿಸಿ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಯ ಕುರಿತು ದೂರದೃಷ್ಟಿಯ ಸಮಗ್ರ ವರದಿ ಸಿದ್ಧಪಡಿಸಿ” ಎಂದು ಜಿಲ್ಲಾಧಿಕಾರಿಯವರಿಗೆ ಸೂಚಿಸಿದರು.

“ಕರ್ನಾಟಕದಲ್ಲೇ ನಂಬರ್‌ 1 ಪ್ರವಾಸಿ ತಾಣ ಉಡುಪಿ ಆಗಬೇಕು. ಮಲ್ಪೆ ಒಂದು ಅಂತರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಿಂಚಬೇಕು ಎನ್ನುವುದು ನನ್ನ ಆಸೆ. ಪ್ರವಾಸಿಗರು ಇನ್ನಷ್ಟು ಬರಬೇಕು. ಗೋಲ್ಡನ್‌ ಸ್ಯಾಂಡ್, ಬ್ಲೂ ಬೀಚ್ ಎರಡೂ ಇಲ್ಲಿವೆ. ಈ ಜಿಲ್ಲೆ ನಿಸರ್ಗದತ್ತ ಸಂಪನ್ಮೂಲ ಇದೆ. ಅದನ್ನು ಸದುಪಯೋಗ ಪಡಿದಿಕೊಳ್ಳಬೇಕು ಅಲ್ಲದೆ, ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು” ಎಂದರು.

“ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ಶಿಕ್ಷಣ ಅಭಿವೃದ್ಧಿಯಲ್ಲಿ ಉಡುಪಿಗೆ ಒಳ್ಳೆಯ ಭವಿಷ್ಯವಿದೆ. ಉಡುಪಿಯಲ್ಲಿ ಇವೆರಡರ ಅಭಿವೃದ್ಧಿಗೆ ಬಹಳಷ್ಟು ಅವಕಾಶವಿದೆ. ಉಡುಪಿ ಜಿಲ್ಲೆ ಎಂದರೆ ಪ್ರತಿಯೊಬ್ಬ ನಾಗರೀಕ ಕೂಡ ಹೆಮ್ಮೆ ಪಡಬೇಕು. ಆ ನಿಟ್ಟಿನಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕಿದೆ” ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago