Featured

ಉಡುಪಿ : ಕರ್ನಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಎರಡು ಮನೆಗಳ ಹಸ್ತಾಂತರ – Vishwanews24

ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಕರ್ನಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಎರಡು ಮನೆಗಳ ಹಸ್ತಾಂತರ

ಉಡುಪಿ : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿಗಳಿಗೆ ಮತ್ತು ಕಲಾವಿದರಿಗೆ ಕರ್ನಾಟಕ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ಉಡುಪಿಯ ನಿಟ್ಟೂರು ಮತ್ತು ಬಡಾನಿಡಿಯೂರಿನಲ್ಲಿ ಒಟ್ಟು ೧೨ ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಎರಡು ಮನೆಗಳ ಉದ್ಘಾಟನೆಯನ್ನು ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕರಾದ ಶ್ರೀ ಮಹಾಬಲೇಶ್ವರ ಎಂ.ಎಸ್ ನೆರವೇರಿಸಿದರು.

ನಿಟ್ಟೂರಿನಲ್ಲಿ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ಸ್ವಾತಿ (ಪ್ರಥಮ ಪಿ.ಯು.ಸಿ) ಮತ್ತು ಬಡಾನಿಡಿಯೂರಿನಲ್ಲಿ ಸೌಕೂರು ಮೇಳದ ಯಕ್ಷಗಾನ ಕಲಾವಿದ ಪ್ರವೀಣ್ ಗಾಣಿಗ ಮತ್ತು ಅವರ ಪುತ್ರಿಯರೂ, ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರೂ ಆದ ಪಲ್ಲವಿ (ದ್ವಿತೀಯ ಪಿ.ಯು.ಸಿ) ಮತ್ತು ಪ್ರಿಯಲಕ್ಷಿ (ಪ್ರಥಮ ಪಿ.ಯು.ಸಿ) ಇವರಿಗೆ ಸಂಸ್ಥೆ ನಿರ್ಮಿಸಿಕೊಟ್ಟಿದೆ.

ಈ ಎರಡೂ ಮನೆಗಳನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದ ಶ್ರೀ ಮಹಾಬಲೇಶ್ವರ ಎಂ.ಎಸ್ ಅವರು ಯಕ್ಷಗಾನ ಕಲಾರಂಗ ಸಮಾಜಮುಖಿಯಾಗಿ ಮಾಡುತ್ತಿರುವ ಕೆಲಸವನ್ನು ಶ್ಲಾಘಿಸಿದರು. ಹೃದಯ ಶ್ರೀಮಂತಿಕೆಯಿ0ದ ಕೂಡಿದ ಸಂಸ್ಥೆಯ ಕಾರ್ಯಕರ್ತರು ಸಮಾಜಕ್ಕೆ ಮಾದರಿಯಾಗಿದ್ದಾರೆ. ಕರ್ಣಾಟಕ ಬ್ಯಾಂಕ್ ಇಂತಹ ಕೆಲಸಗಳನ್ನು ನಿರಂತರ ಪ್ರೋತ್ಸಾಹಿಸುತ್ತಾ ಸರ್ವರ ಅಭ್ಯುದಯಕ್ಕೆ ಕಾರಣವಾಗುತ್ತಾ ಬಂದಿದೆ ಎಂದರು.

ಕರ್ನಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಮುಖ್ಯಸ್ಥರಾದ ಶ್ರೀ ರಾಜಗೋಪಾಲ ಬಿ. ಮತ್ತು ಹಿರಿಯ ಉದ್ಯಮಿ ಶ್ರೀ ಯು. ವಿಶ್ವನಾಥ ಶೆಣೈ, ನಗರಸಭೆಯ ಸ್ಥಾಯಿಸಮಿತಿ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಶೆಟ್ಟಿ, ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಫಲಾನುಭವಿ ಮನೆಗಳ ಬಂಧುಗಳು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಜತೆ ಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ ಧನ್ಯವಾದ ಸಮರ್ಪಿಸಿದರು. ಇವು ಸಂಸ್ಥೆ ಫಲಾನುಭವಿಗಳಿಗೆ ದಾನಿಗಳ ನೆರವಿನಿಂದ ನಿರ್ಮಿಸಿಕೊಟ್ಟ ೨೫ ಹಾಗೂ ೨೬ನೇ ಮನೆಯಾಗಿವೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago