ಉಡುಪಿ: ನಗರದಲ್ಲಿ ವಾಹನ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಸುಗಮ ಸಂಚಾರಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ರಾಷ್ಟೀಯ ಹೆದ್ದಾರಿ ಇಲಾಖೆಯ ಮೂಲಕ ಫ್ಲೈ ಓವರ್ ನಿರ್ಮಾಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಯವರಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಮುಖಾಂತರ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಸಲ್ಲಿಸಿದರು.
ಉಡುಪಿ ನಗರದ ಹೃದಯ ಭಾಗದಲ್ಲಿ ಸಾಗುವ ರಾಷ್ಟೀಯ ಹೆದ್ದಾರಿ 169 ಎ ನಲ್ಲಿ ಪ್ರಮುಖವಾಗಿರುವ ಕಲ್ಸಾಂಕ ಜಂಕ್ಷನ್ ಉಡುಪಿ ಶ್ರೀ ಕೃಷ್ಣ ಮಠ, ಮಣಿಪಾಲ, ಅಂಬಾಗಿಲು ಸಂಪರ್ಕಿಸುವ ಕೇಂದ್ರ ಭಾಗವಾಗಿರುವ ಕಾರಣ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ರಜಾ ದಿನಗಳಲ್ಲಿ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂಲಕ ಫ್ಲೈ ಓವರ್ ನಿರ್ಮಾಣಕ್ಕೆ ಮುಂದಿನ ಸಭೆಯಲ್ಲಿ ನಗರಸಭೆ ಮೂಲಕವೂ ಪ್ರಸ್ತಾವನೆ ಸಲ್ಲಿಸಲಾಗುವುದು ಸಂಸದರು ಈ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸ್ಸು ಮಾಡುವಂತೆ ಸಂಸದರಿಗೆ ತಿಳಿಸಿದರು.
ಮನವಿಗೆ ಸ್ಪಂದಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಲ್ಸಂಕ ಜಂಕ್ಷನ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ರೊಂದಿಗೆ ಕೇಂದ್ರ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಶೀಘ್ರ ಫ್ಲೈ ಓವರ್ ನಿರ್ಮಾಣಕ್ಕೆ ಮಂಜೂರಾತಿ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…