ಉಡುಪಿ

ಉಡುಪಿ : ಕಳೆದುಹೋದ ಮೊಬೈಲ್ ನ ಬ್ಲಾಕ್ ಮಾಡೋದು ಹೇಗೆ ? ಈ ಕೆಳಕಂಡ ವಿಧಾನಗಳನ್ನು ಅನುಸರಿಸಿ – ಇಲ್ಲಿದೆ ಪೊಲೀಸ್ ಮಾಹಿತಿ  – Vishwanews24

ಉಡುಪಿ : ಕಳೆದುಹೋದ ಮೊಬೈಲ್ ನ ಬ್ಲಾಕ್ ಮಾಡೋದು ಹೇಗೆ ?

ಈ ಕೆಳಕಂಡ ವಿಧಾನಗಳನ್ನು ಅನುಸರಿಸಿ – ಇಲ್ಲಿದೆ ಪೊಲೀಸ್ ಮಾಹಿತಿ

ಉಡುಪಿ: ಮೊಬೈಲ್ ಕಳೆದರೆ ಬ್ಲಾಕ್ ಮಾಡುವುದು ಅತಿ ಮುಖ್ಯ! ಹೌದು ಇದು ನಿಮ್ಮ ಮಾಹಿತಿಗಳ ಸುರಕ್ಷತೆಗೆ ಅಷ್ಟೇ ಅಲ್ಲದೆ ಇತರ ಸೈಬರ್ ಕ್ರೈಂಗಳನ್ನೂ ತಡೆಯಬಹುದಾಗಿದೆ. ಹಾಗಿದ್ರೆ ಕಳೆದುಹೋದ ಮೊಬೈಲ್ ನ ಬ್ಲಾಕ್ ಮಾಡೋದು ಹೇಗೆ, ಪೊಲೀಸರು ಹೇಳುವುದೇನು? ಇಲ್ಲಿದೆ ವಿವರ.

ಇತ್ತೀಚಿನ ದಿನಗಳಲ್ಲಿ ಕಳುವಾದ, ಕಾಣೆಯಾದ, ಸುಲಿಗೆಯಾದ ಮೊಬೈಲ್ ಫೋನ್ಗಳು ಸೈಬರ್ ಅಪರಾಧ ನಾರ್ಕೋಟಿಕ್ಸ್ ಅಪರಾಧ ಸೇರಿದಂತೆ ಇತರೆ ಗಂಭೀರ ಅಪರಾಧಗಳಲ್ಲಿ ಬಳಕೆಯಾಗುತ್ತಿರುವುದು ಗಣನೀಯವಾಗಿ ಕಂಡುಬಂದಿರುತ್ತದೆ. ಇಂತಹ ಮೊಬೈಲ್ ಫೋನ್ಗಳ ದುರ್ಬಳಕೆಯನ್ನು ತಡೆಗಟ್ಟಲು ಕೇಂದ್ರ ಟೆಲಿಕಮ್ಯುನಿಕೇಶನ್ ಇಲಾಖೆಯಿಂದ ಬ್ಲಾಕ್ ಮಾಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಹಾಗೂ ಪೊಲೀಸ್ ಇಲಾಖೆಯಿಂದ ಕೂಡಾ ಈ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲಾಗುತ್ತಿದೆ.

ಈ ಕೆಳಕಂಡ ವಿಧಾನಗಳನ್ನು ಅನುಸರಿಸುವುದರ ಮೂಲಕ ಕಳುವಾದ ಮೊಬೈಲ್ ಫೋನ್ಗಳನ್ನು ಬ್ಲಾಕ್ ಮಾಡಬಹುದಾಗಿದೆ.

ತಕ್ಷಣವೇ KSP E-Lost (ಕೆಎಸ್ಪಿ ಇ-ಲಾಸ್ಟ್) ಅಪ್ಲಿಕೇಶನ್ ನಲ್ಲಿ ದೂರನ್ನು ಸಲ್ಲಿಸಿ (ಡಿಜಿಟಲ್ ಇ ಅಕ್ನಾಲಜ್ಮೆಂಟ್) Digital E Acknowledgement ಪಡೆದುಕೊಳ್ಳಬೇಕು. ಅಥವಾ ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರನ್ನು ಸಲ್ಲಿಸಿ ಸ್ವೀಕೃತಿಯನ್ನು ಪಡೆದುಕೊಳ್ಳುವುದು. ಸ್ವೀಕೃತಿಯ ಪ್ರತಿಯನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.

ನೀವು ಕಳೆದುಕೊಂಡಿರುವ ಸಿಮ್ ಕಾರ್ಡ್ ಅನ್ನು ಸಂಬಂಧಪಟ್ಟ ಸರ್ವಿಸ್ ಪ್ರೊವೈಡರ್ ನಿಂದ ಮತ್ತೆ ಪಡೆದುಕೊಂಡು ಒ.ಟಿ.ಪಿ ಪಡೆಯಲು ಸದರಿ ಸಿಮ್ ಕಾರ್ಡನ್ನು ಚಾಲನೆಯಲ್ಲಿ ಇಟ್ಟು ಕೊಳ್ಳುವುದು CEIR PORTAL (ಸಿಇಐಆರ್ ಪೋರ್ಟಲ್) ನಲ್ಲಿ ಒ.ಟಿ.ಪಿ ಪಡೆಯಲು ಇದು ಅನುಕೂಲವಾಗುತ್ತದೆ.

ನಂತರ www.ceir.gov.in ವೆಬ್ ಸೈಟ್ಗೆ ಹೋಗಿ ತಮ್ಮ ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಗಳ ಮಾಹಿತಿಯನ್ನು ನಮೂದಿಸಬೇಕು.

ಸದರಿ ಮಾಹಿತಿ ನಮೂದಿಸಿದ 24 ಗಂಟೆಗಳಲ್ಲಿ ತಮ್ಮ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ನಂತರ ಯಾರೂ ಕೂಡಾ ಆ ಮೊಬೈಲ್ ಅನ್ನು ದುರ್ಬಳಕೆ ಮಾಡಲು ಸಾದ್ಯವಿರುವುದಿಲ್ಲ.

ಕಳುವಾದ/ಕಾಣೆಯಾದ/ಸುಲಿಗೆಯಾದ ಮೊಬೈಲ್ ಫೋನ್ ಪತ್ತೆಯಾದರೆ ಈಗಾಗಲೇ ತಿಳಿಸಿರುವ ಸಿಇಐಆರ್ ಪೋರ್ಟಲ್ ( CEIR PORTAL) ನಲ್ಲಿ ಲಾಗಿನ್ ಆಗಿ ಅನ್ ಬ್ಲಾಕ್ ಮಾಡಿ ಉಪಯೋಗಿಸಬಹುದು.

ಹಾಗೆಯೇ ಸಾರ್ವಜನಿಕರು ಪೊಲೀಸ್ ಠಾಣೆಯನ್ನು ಸಂಪರ್ಕಿಸಿದರೆ CEIR PORTAL ಮೂಲಕ ಕಳುವಾದ/ಕಾಣೆಯಾದ ಫೋನ್ ಅನ್ನು ಬ್ಲಾಕ್ ಮಾಡಲಾಗುವುದು ಹಾಗೂ ಫೋನ್ ಪತ್ತೆಯಾದಲ್ಲಿ ಅನ್ಗ್ ಬ್ಲಾಕ್ ಮಾಡಲಾಗುವುದು.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

32 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago