ಉಡುಪಿ :ಮಲ್ಪೆ ಬಂದರು ಮತ್ತು ಸಮುದ್ರದಲ್ಲಿ ಅವಘಡಗಳು ಸಂಭವಿಸಿದಾಗ ಸದಾ ನೆರವಿಗೆ ಧಾವಿಸುವ ಈಶ್ವರ್ ಮಲ್ಪೆ ,ಈ ಬಾರಿ ಎರಡು ನಾಯಿಗಳನ್ನು ರಕ್ಷಣೆ ಮಾಡಿದ್ದಾರೆ.
ನೀವು ನಂಬಲಿಕ್ಕಿಲ್ಲ ,ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಈ ನಾಯಿಗಳು ಬಂದರಿನ ಧಕ್ಕೆಯೊಳಗೆ ಹೊರ ಬರಲಾಗದೆ ಅಕ್ಷರಶಃ ಬಂಧಿಯಾಗಿದ್ದವು.
ಎಲ್ಲ ಕಡೆ ನೀರಿನಿಂದ ಆವೃತವಾಗಿರುವುದರಿಂದ ನಾಯಿಗಳು ಒಳಗೇ ಬಂಧಿಯಾಗಿದ್ದವು.
ಧಕ್ಕೆಯಲ್ಲಿ ಯಾರಾದರೂ ಎಸೆದ ತಿಂಡಿಗಳನ್ನು ತಿಂದು ಇವು ಬದುಕಿದ್ದವು.ಈ ವಿಷಯ ಅರಿತ ಆಪದ್ಭಾಂಧವ ಈಶ್ವರ್ ಮಲ್ಪೆ ,ನಾಯಿಗಳನ್ನು ಹೊರತೆಗೆಯಲು ಮುಂದಾದರು.
ಇದಕ್ಕಾಗಿ ಜಾಣ್ಮೆಯಿಂದ ಕಾರ್ಯಾಚರಣೆ ನಡೆಸಿದರು.ಹಗ್ಗ ,ಟ್ಯೂಬ್ ಮೂಲಕ ಇಳಿದು ನಾಯಿಗಳನ್ನು ಹೊರತರಲು ಪ್ರಯತ್ನಿಸಿದರು.
ಆದರೆ ಸುಲಭದಲ್ಲಿ ಅವು ಹೊರಬರಲಿಲ್ಲ.ಸುತ್ತಲೂ ಈ ಕಾರ್ಯಾಚರಣೆ ನೋಡಲು ಧಕ್ಕೆಯಲ್ಲಿ ಸಾಕಷ್ಟು ಜನ ಸೇರಿದ್ದರು.
ತಾನು ಹಿಡಿದ ಕೆಲಸವನ್ನು ಪೂರ್ಣಗೊಳಿಸದೆ ಮೇಲೆ ಬರುವವರಲ್ಲ ,ಈಶ್ವರ್ ಮಲ್ಪೆ.ಜಾಣ್ಮೆಯಿಂದ ನಾಯಿಗಳ ಮನವೊಲಿಸಿ ,ಹಗ್ಗದ ಮೂಲಕ ಹೊರ ತೆಗೆದರು.
ಈ ನಾಯಿಗಳು ವರ್ಷದಿಂದ ಒಳಗೇ ಬಂಧಿಯಾಗಿದ್ದರಿಂದ ನಡೆಯಲೂ ಆಗುತ್ತಿರಲಿಲ್ಲ.ಕೊನೆಗೂ ನಾಯಿಗಳು ಹೊರಬಂದಾಗ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…