Featured

ಉಡುಪಿ : ಕಾಂಗ್ರೆಸ್‌ನಿಂದ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಒತ್ತಾಯ – Vishwanews24

ಉಡುಪಿ : ಕಾಂಗ್ರೆಸ್‌ನಿಂದ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಒತ್ತಾಯ

ಉಡುಪಿ : ಬುಧವಾರ ಸಂಜೆ ನಡೆದ ಅತ್ಯಂತ ಅನಿರೀಕ್ಷಿತ ಬೆಳವಣಿಗೆಯಲ್ಲಿ ಜಿಲ್ಲೆಯ ಕೆಲವು ಕಾಂಗ್ರೆಸ್ ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನಿಂದ ಎಂ.ಎನ್ ರಾಜೇಂದ್ರಕುಮಾರ್‌ಗೆ ವಿಧಾನಪರಿಷತ್ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ್ ಪೂಜಾರಿ, ಕಣಚೂರು ಮೋಹನ್ ಹಾಗೂ ಎಂ.ಎನ್.ರಾಜೇಂದ್ರಕುಮಾರ್ ಅವರು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ .ಎಂ.ಎನ್.ರಾಜೇಂದ್ರಕುಮಾರ್ ಅವರಿಗೆ ದ.ಕ. -ಉಡುಪಿಯಿಂದ ಕಾಂಗ್ರೆಸ್ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ನೀಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಡಿಕೆಶಿ ಅವರನ್ನು ಒತ್ತಾಯಿಸಿದ್ದಾರೆ.

ಎಂ.ಎನ್.ರಾಜೇಂದ್ರಕುಮಾರ್ ಅವರು ಎಂಎಲ್ಸಿ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಅವರ ಚುನಾವಣಾ ಕಚೇರಿ ಉದ್ಘಾಟನೆಯಾಗಿದೆ. ಈ ಭೇಟಿಯೂ ಪರಿಷತ್ ಚುನಾವಣೆಯ ಬಗ್ಗೆಯೂ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಈ ಹಿಂದೆ ಚುನಾವಣೆ ಘೋಷಣೆಯಾದಾಗ 11 ಜನ ಕಾಂಗ್ರೆಸ್‌ ಆಕಾಂಕ್ಷಿಗಳಿದ್ದರು. ನಂತರ ಅಚ್ಚರಿಯ ನಡೆಯಲ್ಲಿ ಬ್ರಹ್ಮಾವರದಿಂದ ಪಕ್ಷದ ನೆಲಮಟ್ಟದ ಕಾರ್ಯಕರ್ತ ಭುಜಂಗ ಶೆಟ್ಟಿ ಪಕ್ಷದಿಂದ ದಕ್ಷಿಣ ಕನ್ನಡ-ಉಡುಪಿಗೆ ಸರ್ವಾನುಮತದ ಅಭ್ಯರ್ಥಿಯಾಗುವ ನಿರೀಕ್ಷೆ ಇತ್ತು.

ಕೆಲವು ಕಾಂಗ್ರೆಸ್ ನಾಯಕರ ಬೆಂಬಲದೊಂದಿಗೆ ಸಹಕಾರಿ ಮುಖಂಡ ಎಂಎನ್ ರಾಜೇಂದ್ರಕುಮಾರ್ ಪಕ್ಷದಿಂದ ಟಿಕೆಟ್ ಬಯಸುತ್ತಿರುವ ಕಾರಣ ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಕುತೂಹಲ ಸೃಷ್ಟಿಯಾಗಿದೆ.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

18 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

18 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

18 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

18 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago