Featured

ಉಡುಪಿ: ಕಾಂಗ್ರೆಸ್ ಇನ್ನು ಮುಂದೆ ಭೂತಕಾಲದ ಪಾರ್ಟಿ ,  ವರ್ತಮಾನದಲ್ಲಿ ಇಲ್ಲ. ಭವಿಷ್ಯದಲ್ಲೂ ಇರುವುದಿಲ್ಲ : ಸುನಿಲ್ ಕುಮಾರ್ – Vishwanews24

ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲೂ ಧೂಳಿಪಟ..

ಕೇವಲ ಎರಡಂಕೆಯನ್ನು ದಾಟಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಾಗಿಲ್ಲ..

ಯೋಗಿ ದಕ್ಷ ಆಡಳಿತ, ಮೋದಿ ಜನಪ್ರಿಯತೆ ಮತ್ತೆ ಯಶಸ್ವಿಯಾಗಿದೆ..

ಅಭಿವೃದ್ಧಿ ,ಹಿಂದುತ್ವ ,ದಕ್ಷ ಆಡಳಿತಕ್ಕೆ ಯುಪಿಯಲ್ಲಿ ಜಯ..

ಇದೇ ಉತ್ಸಾಹದಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ..

ಉಡುಪಿ : ಕಾಂಗ್ರೆಸ್ ಇನ್ನು ಮುಂದೆ ಭೂತಕಾಲದ ಪಾರ್ಟಿ. ವರ್ತಮಾನದಲ್ಲಿ ಇಲ್ಲ. ಭವಿಷ್ಯದಲ್ಲೂ ಕಾಂಗ್ರೆಸ್ ಇರುವುದಿಲ್ಲ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲೂ ಧೂಳಿಪಟವಾಗಿದೆ. ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಂಡಿದ್ದು, ಕೇವಲ ಎರಡಂಕೆಯನ್ನು ದಾಟಲು ಆ ಪಕ್ಷಕ್ಕೆ ಸಾಧ್ಯವಾಗಿಲ್ಲ ಎಂದರು.

ಅಭಿವೃದ್ಧಿ ,ಹಿಂದುತ್ವ ,ದಕ್ಷ ಆಡಳಿತಕ್ಕೆ ಯುಪಿಯಲ್ಲಿ ಜಯ ಸಿಕ್ಕಿದೆ. ಯೋಗಿ ದಕ್ಷ ಆಡಳಿತ, ಮೋದಿ ಜನಪ್ರಿಯತೆ ಮತ್ತೆ ಯಶಸ್ವಿಯಾಗಿದೆ. ನಮ್ಮೆಲ್ಲಾ ಕಾರ್ಯಕರ್ತರಿಗೆ ಫಲಿತಾಂಶ ಉತ್ಸಾಹ ಕೊಟ್ಟಿದೆ. ಇದೇ ಉತ್ಸಾಹದಲ್ಲಿ ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದ ಅವರು, ಇದಕ್ಕೆ ಬೇಕಾದ ಎಲ್ಲಾ ತಂತ್ರಗಾರಿಕೆ ಮಾಡುತ್ತೇವೆ ಎಂದು ತಿಳಿಸಿದರು.

ಉತ್ತರಾಖಂಡ, ಗೋವಾ, ಮಣಿಪುರದಲ್ಲಿ ಪಕ್ಷ ಮರು ಆಯ್ಕೆಗೊಂಡಿದೆ. ಉತ್ತರಾಖಂಡದಲ್ಲಿ ಬಿಜೆಪಿ ವಿರೋಧಿ ಅಲೆ ಇದೆ ಎನ್ನಲಾಗುತ್ತಿತ್ತು. ಮೂವರು ಸಿಎಂ ಬದಲಾವಣೆಯಿಂದ ವಿರೋಧಿ ಅಲೆ ಉಂಟಾಗಿದೆ ಎನ್ನುತ್ತಿದ್ದರು. ಎಲ್ಲವನ್ನು ಮೀರಿ ಜನ ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ ಎಂದು ಸುನಿಲ್ ಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago