Featured

ಉಡುಪಿ : ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ  ಗ್ಯಾರೆಂಟಿಯ ಬಗ್ಗೆ ಮಾತನಾಡುತ್ತಿಲ್ಲ , ಬಿಜೆಪಿಯವರಿಗೆ ಗ್ಯಾರಂಟಿಯ ಬಗ್ಗೆ ಯೋಚನೆ : ರಮೇಶ್ ಕಾಂಚನ್ – Vishwanews24

ಉಡುಪಿ : ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ  ಗ್ಯಾರೆಂಟಿಯ ಬಗ್ಗೆ ಮಾತನಾಡುತ್ತಿಲ್ಲ ..

ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ ನಮ್ಮ ಗ್ಯಾರಂಟಿಯ ಬಗ್ಗೆ ಕನವರಿಸುತ್ತಾ ಇರುತ್ತಾರೆ: ರಮೇಶ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದಂತಹ ಮತದಾರರೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿದ ಗ್ಯಾರೆಂಟಿಯ ಬಗ್ಗೆ ಮಾತನಾಡುತ್ತಿಲ್ಲ ಏಕೆಂದರೆ ಅವರಿಗೆ ಕಾಂಗ್ರೆಸ್ ಪಕ್ಷವು ನೀಡಿದ ಭರವಸೆ ಹಾಗೂ ಗ್ಯಾರಂಟಿಯನ್ನು ಖಂಡಿತವಾಗಿಯೂ ನೀಡುತ್ತಾರೆ ಎಂಬ ನಂಬಿಕೆ ಇದೆ. ಆದರೆ ಈ ಲಂಚಕೋರ ಹಾಗೂ ಸುಳ್ಳುಗಳ ಭರವಸೆಯನ್ನು ನೀಡಿದಂತಹ ಬಿಜೆಪಿಯವರಿಗೆ ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿಯ ಬಗ್ಗೆ ಯೋಚನೆ ಆಗಿದೆ ಏಕೆಂದರೆ ನಾವು ಈ ಗ್ಯಾರೆಂಟಿಯನ್ನು ಅನುಷ್ಠಾನಕ್ಕೆ ತಂದಾಗ ರಾಜ್ಯದಲ್ಲಿ ಬಿಜೆಪಿ ಕಣ್ಮರೆಯಾಗೋದು ಸಹಜ ಅದಕ್ಕಾಗಿ ಈ ಬಿಜೆಪಿ ನಾಯಕರುಗಳು ನಿದ್ದೆಯಲ್ಲಿ ಕೂಡ ನಮ್ಮ ಗ್ಯಾರಂಟಿ ಯ ಬಗ್ಗೆ ಕನವರಿಸುತ್ತಾ ಇರುತ್ತಾರೆ ಎಂದು ರಮೇಶ್ ಕಾಂಚನ್ ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ತಾವು ಅಧಿಕಾರಕ್ಕೆ ಬರುವ ಮೊದಲು ವಿದೇಶಿ ಬ್ಯಾಂಕುಗಳಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಕಪ್ಪು ಹಣ ನಮ್ಮ ಭಾರತೀಯರಿಗೆ ಸೇರಿದ್ದು ಅದನ್ನು ಕೇವಲ 100 ದಿನದಲ್ಲಿ ವಾಪಸ್ ತಂದು ದೇಶದ ಪ್ರತಿಯೊಬ್ಬ ಭಾರತೀಯನ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇನೆ, ಯುವಕರಿಗೆ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ, 2022ರ ಒಳಗೆ ಪ್ರತಿ ಒಬ್ಬ ಭಾರತೀಯನಿಗೆ ಮನೆ ನಿರ್ಮಾಣ ಮಾಡುತ್ತೇನೆ ಎಂದು ಹೇಳಿ ಅಧಿಕಾರವನ್ನು ಅನುಭವಿಸುತ್ತ ಇಂದಿಗೆ 108 ತಿಂಗಳು ಕಳೆದರು ಒಂದು ಭರವಸೆಯನ್ನು ಕೂಡ ಯಾವುದೇ ಭಾರತೀಯನಿಗೆ ತಲುಪಿಸಲಿಲ್ಲ ಎಂಬುದು ಬಿಜೆಪಿಯ ನಾಯಕರಿಗೆ ತಿಳಿದಿರಲಿ. ಸುಳ್ಳು ಹೇಳಿ ಜನಸಾಮಾನ್ಯರನ್ನು ಲೂಟಿ ಮಾಡುವುದೇ ಬಿಜೆಪಿಯ ನಾಯಕರುಗಳ ಕಾಯಕವಾದರೆ ಕೊಟ್ಟ ಭರವಸೆ ಹಾಗೂ ಗ್ಯಾರಂಟಿಯನ್ನು ನೀಡಿ ಜನಸಾಮಾನ್ಯರನ್ನು ಉದ್ದಾರ ಮಾಡುವುದೇ ಕಾಂಗ್ರೆಸ್ ಪಕ್ಷದ ಕೆಲಸವಾಗಿದೆ. ಈ ಹಿಂದೆಯೂ ಕೂಡ ನುಡಿದಂತೆ ನಡೆದಿದ್ದೇವೆ ಮುಂದೆಯೂ ನುಡಿದಂತೆಯೇ ನಡೆಯುತ್ತೇವೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಬಿಜೆಪಿಯ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago