Featured

ಉಡುಪಿ : ಕಾಂಗ್ರೆಸ್ – ಬಿಜೆಪಿಗೆ ಪ್ರತ್ಯೇಕ ಕೋವಿಡ್ ರೂಲ್ಸ್ ಏಕೆ? ರಮೇಶ್ ಕಾಂಚನ್  – Vishwanews24

ಉಡುಪಿ : ಕಾಂಗ್ರೆಸ್ – ಬಿಜೆಪಿಗೆ ಪ್ರತ್ಯೇಕ ಕೋವಿಡ್ ರೂಲ್ಸ್ ಏಕೆ? ರಮೇಶ್ ಕಾಂಚನ್  – Vishwanews24

ಉಡುಪಿ: ಕೊರಗ ಸಮುದಾಯದವರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ, ದೌರ್ಜನ್ಯಕ್ಕೊಳಗಾದವರ ವಿರುದ್ಧವೇ ಸುಳ್ಳು ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ ನಡೆದ ಕಾಂಗ್ರೆಸ್ ಪಕ್ಷದ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ವಿರುದ್ದ ಕೇಸು ದಾಖಲಿಸಿರುವುದನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಖಂಡಿಸಿದ್ದಾರೆ.

ದೇಶದ ಮೂಲ ನಿವಾಸಿಗಳಾದ ಕೊರಗರಿಗೆ ನ್ಯಾಯ ಒದಗಿಸುವಂತೆ, ಜಿಲ್ಲಾ ಕಾಂಗ್ರೆಸ್ ವತಿಯಿಂದ ಸರಕಾರದ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ನಾಯಕರ ಸಹಿತ 22 ಜನರ ವಿರುದ್ಧ ಜಿಲ್ಲಾಡಳಿತ ಸುಳ್ಳು ಪ್ರಕರಣ ದಾಖಲಿಸಿದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷದಿಂದ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಅನೇಕ ಕಾರ್ಯಕ್ರಮಗಳು ನಡೆಯುತ್ತಿದ್ದರೂ, ಅವರ ಮೇಲೆ ಯಾವುದೇ ಕೇಸನ್ನು ದಾಖಲಿಸಿಲ್ಲ. ಸಮಾಜದಲ್ಲಿ ತುಳಿತಕ್ಕೆ ಒಳಗಾದ ಜನಾಂಗದ ಪರವಾಗಿ ಮಾಡಿದ ಪ್ರತಿಭಟನೆಗೆ ಮಾತ್ರ ಕೇಸನ್ನು ದಾಖಲಿಸಿದ್ದಾರೆ. ಆಡಳಿತ ನಡೆಸುವ ಬಿಜೆಪಿ ಪಕ್ಷ ನಡೆಸುವ ಕಾರ್ಯಕ್ರಮಕ್ಕೆ ಯಾವುದೇ ರೀತಿಯಲ್ಲಿ ಕೇಸು ದಾಖಲಿಸದೆ ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತದ ದ್ವಂದ್ವ ನಿಲುವನ್ನು ಖಂಡಿಸುವುದಾಗಿ ಕಾಂಚನ್ ಹೇಳಿದ್ದಾರೆ.

ಹಾಗಾದರೆ ನೊಂದ ಶೋಷಿತ ಸಮುದಾಯದ ಪರವಾಗಿ ಧ್ವನಿ ಎತ್ತುವುದು ತಪ್ಪೇ? ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಸರಕಾರ ಉತ್ತರಿಸಲಿ ಎಂದು ಕಾಂಚನ್ ಒತ್ತಾಯಿಸಿದ್ದಾರೆ. ಇಂತಹ ಬೆದರಿಸುವ ತಂತ್ರಗಳಿಗೆ ಕಾಂಗ್ರೆಸ್ ಎಂದೂ ಮಣಿಯದೆ, ಬಡವರು, ದಲಿತರ ಪರ ತನ್ನ ಹೋರಾಟವನ್ನು ಇನ್ನಷ್ಟು ಬಲಪಡಿಸಲಿದೆ ಎಂದವರು ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

4 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

6 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

7 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

7 hours ago