Featured

ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ – Viswhanews24

ಉಡುಪಿ: ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯ ಬಿಜೆಪಿ ಸೇರ್ಪಡೆ

ಉಡುಪಿ: ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಡೆಕಾರ್ ಗ್ರಾಮಪಂಚಾಯತ್ ನ 3 ಭಾರಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಕೋಟ್ಯಾನ್  ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಕೇಂದ್ರ ಸರಕಾರ ಕ್ಷೇತ್ರ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ರಾಜ್ಯ ಖಾತೆ ಸಚಿವರಾದ ಬಿ.ಎಲ್ ವರ್ಮಾ ಅವರೊಂದಿಗೆ ಶಾಸಕರಾದ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಧ್ವಜವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಗೋಪಾಲ ಶೆಟ್ಟಿ, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯಶ್ ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿಗಳಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

6 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

14 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

14 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

14 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

15 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

15 hours ago