Featured

ಉಡುಪಿ : ಕಾಂಗ್ರೆಸ್‌ ಮಹಿಳೆಯರಿಗೆ ಸ್ವಾಭಿಮಾನದ ಬದುಕಿಗಾಗಿ ಗ್ಯಾರಂಟಿ ನೀಡಿದೆ: ಸೌಮ್ಯ ರೆಡ್ಡಿ – vishwanews24

ಉಡುಪಿ : ಕೇಂದ್ರ ಸರಕಾರ ಕಳೆದ 10 ವರ್ಷಗಳಿಂದ ಅಚ್ಚೆದಿನ್ ಎನ್ನುತ್ತಲೇ ಇದ್ದು, ಅದೆಲ್ಲೂ ಕಣ್ಣಿಗೆ ಕಾಣಿಸುತ್ತಿಲ್ಲ

ಬ್ರಿಟಿಷರ ರೀತಿ ಒಡೆದು ಆಳುವ ನೀತಿಯನ್ನು ಬಿಜೆಪಿ ಇಂದು ಅನುಸರಿಸುತ್ತಿದೆ : ಸೌಮ್ಯ ರೆಡ್ಡಿ

ಉಡುಪಿ : ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರು ಸ್ವಾಭಿಮಾನದ ಬದುಕಿಗೆ ಬೇಕಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಿದೆ. ಆದರೆ ಕೇಂದ್ರ ಸರಕಾರ ಕಳೆದ 10 ವರ್ಷಗಳಿಂದ ಅಚ್ಚೆದಿನ್ ಎನ್ನುತ್ತಲೇ ಇದ್ದು, ಅದೆಲ್ಲೂ ಕಣ್ಣಿಗೆ ಕಾಣಿಸುತ್ತಿಲ್ಲ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾದ ‘ಗಾಂಧಿ ಭಾರತ ಮಹಿಳಾ ಸಮಾವೇಶ’ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ರಾಜ್ಯ ಕಾಂಗ್ರೆಸ್ ಸರಕಾರ ಮಹಿಳೆಯರ ಸಾಮಾಜಿಕ, ಆರ್ಥಿಕ ಸ್ವಾವಲಂಬನೆಯ ಬದುಕಿಗಾಗಿ ಗ್ಯಾರಂಟಿ ನೀಡಿದೆ. ಕೇಂದ್ರ ಸರಕಾರ ಬೆಲೆ ಏರಿಕೆ ಮೂಲಕ ಬಡವರ, ಮಧ್ಯಮ ವರ್ಗ ಹಾಗೂ ಮಹಿಳೆಯರ ಬದುಕು ದುಸ್ತರಗೊಳಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದೆ ಬ್ರಿಟಿಷರು ದೇಶದಲ್ಲಿ ಯಾವ ರೀತಿ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದ್ದರೋ ಅದೇ ಮಾದರಿಯ ಆಡಳಿತವನ್ನು ಬಿಜೆಪಿ ಇಂದು ಅನುಸರಿಸುತ್ತಿದೆ. ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜ ವನ್ನು ಒಡೆದು ಆಳುವ ನೀತಿ ಅನುಸರಿಸುವ ಜತೆಗೆ ಜಾತಿ, ಧರ್ಮದ ವಿಷಬೀಜ ಬಿತ್ತಿ ದೇಶವನ್ನು ಹಾಳು ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಎಲ್ಲರಿಗೂ ತಲುಪಿಸುವ ಜತೆಗೆ ಗ್ರಾಮ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚೆಚ್ಚು ಮಹಿಳೆಯರನ್ನು ನೋಂದಾಯಿಸುವ ಕಾರ್ಯ ಆಗಬೇಕು. ಶೀಘ್ರವೇ ಜಿಪಂ, ತಾಪಂ ಚುನಾವಣೆಗಳು ಬರಲಿರುವುದರಿಂದ ಪಕ್ಷವನ್ನು ಈಗಿ ನಿಂದಲೇ ಸಜ್ಜುಗೊಳಿಸಬೇಕು ಎಂದು ಮಹಿಳಾ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಗ್ಯಾರಂಟಿ ಸಮಿತಿ ಸೇರಿದಂತೆ ವಿವಿಧ ದೇವಸ್ಥಾನಗಳ ವ್ಯವಸ್ಥಾಪನ ಸಮಿತಿಗೆ ಆಯ್ಕೆಯಾದ ಮಹಿಳೆ ಯರನ್ನು ಗೌರವಿಸಲಾಯಿತು. ಸಾಧಕರಿಗೆ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ವರಂಗದ ಎಂ.ಡಿ. ಅಧಿಕಾರಿ ಮತ್ತು ಕಮಲಾ ಅಧಿಕಾರಿ ಹಾಗೂ ಉಮಾಬಾ ಕುಂದಾಪುರ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಯಿತು.

ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಎಂ.ಎ.ಗಫೂರ್, ಮುನಿಯಾಲು ಉದಯಕುಮಾರ್ ಶೆಟ್ಟಿ, ರಮೇಶ್ ಕಾಂಚನ್, ನೀರೆ ಕೃಷ್ಣ ಶೆಟ್ಟಿ, ವೆರೊನಿಕಾ ಕರ್ನೆಲಿಯೋ, ಜ್ಯೋತಿ ಹೆಬ್ಬಾರ್, ವಿಲಿಯಂ ಮಾರ್ಟಿಸ್, ರಾಘವೇಂದ್ರ ಶೆಟ್ಟಿ, ಗೋಪೀನಾಥ ಭಟ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಚಂದ್ರಕಲಾ, ಕುಶಾಲ ಶೆಟ್ಟಿ, ಅಣ್ಣಯ್ಯ ಸೇರಿಗಾರ್, ಹರೀಶ್ ಕಿಣಿ, ಮೀನಾಕ್ಷಿ ಮಾಧವ ಬನ್ನಂಜೆ, ಮಮತಾ ಶೆಟ್ಟಿ, ರೇಖಾ, ಶಾಂತಲತಾ ಶೆಟ್ಟಿ ಮೊದಲಾದವರು ಉಪಸ್ಥಿರಿದ್ದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ ಸ್ವಾಗತಿಸಿ ಪ್ರಸ್ತಾವನೆಗೈದರು. ಡಾ. ಸುನಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago