ಉಡುಪಿ: ಗುಜರಾತ್‌ನಲ್ಲಿ ಬಿಜೆಪಿ ಮತ್ತೆ ಅಧಿಕಾರವನ್ನು ಉಳಿಸಿಕೊಂಡಿರುವುದನ್ನೇ ದೊಡ್ಡ ಸಾಧನೆ ಎಂಬಂತೆ ಬಿಂಬಿಸಲಾಗುತ್ತಿದೆ. ಇದೇ ಹೊತ್ತಿನಲ್ಲಿ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಬಂದಿದೆ. ದೇಶದ ರಾಜಧಾನಿಯಾಗಿರುವ ದೆಹಲಿಯಲ್ಲೇ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಒಂದು ರಾಜ್ಯದಲ್ಲಿ ಗೆದ್ದಿರುವುದನ್ನೇ ಸಂಭ್ರಮಿಸಿ ಎರಡು ಕಡೆ ಸೋತಿರುವುದನ್ನು ಮರೆಮಾಚಲಾಗುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಹೇಳಿದ್ದಾರೆ
ಕಾಂಗ್ರೆಸ್ ಮುಕ್ತ ಭಾರತ ಎಂದು ಹೇಳುತ್ತಿದ್ದ ಬಿಜೆಪಿಗೆ ಇತ್ತೀಚೆಗೆ ನಡೆದ ಹಲವು ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಭಾರತ ಮಾಡಲು ಅಸಾಧ್ಯ ಎಂದು ಜನರು ಸ್ಪಷ್ಟ ಸಂದೇಶ ನೀಡಿದ್ದಾರೆ. ಇದೀಗ ಹಿಮಾಚಲ ಪ್ರದೇಶದಲ್ಲಿ ಅಧಿಕಾರ ಹಿಡಿದಿರುವುದು ಕಾಂಗ್ರೆಸ್ ಇನ್ನೂ ಒಂದು ಹೆಜ್ಜೆ ಮುಂದೆ ಬಂದಂತಾಗಿದೆ. ಕಾಂಗ್ರೆಸ್ ಮುಂದೆ ಇನ್ನಷ್ಟು ಬಲಿಷ್ಠಗೊಳ್ಳಲಿದೆ.
ಇನ್ನು ಗುಜರಾತ್ ಫಲಿತಾಂಶವನ್ನು ಕರ್ನಾಟಕದ ಮುಂದಿನ ಚುನಾವಣೆಗೆ ದಿಕ್ಸೂಚಿ ಎನ್ನುವುದು ಸರಿಯಲ್ಲ. ಅದು ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಯಾಕೆ ದಿಕ್ಸೂಚಿಯಲ್ಲ? ಕರ್ನಾಟಕವು ಭೌಗೋಳಿಕವಾಗಿ ಭಿನ್ನವಾದುದು. ಇಲ್ಲಿನ ಜನಜೀವನ, ಚಿಂತನಕ್ರಮ ಎಲ್ಲವೂ ಭಿನ್ನವಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ ನೀತಿಯಿಂದ ಮಾತ್ರವಲ್ಲ, ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದಲೂ ಜನರು ಬೇಸತ್ತಿದ್ದಾರೆ. ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಶತಸಿದ್ಧ. ಬೇರೆ ಯಾವುದೋ ರಾಜ್ಯದ ಚುನಾವಣೆ ಇಲ್ಲಿ ಪ್ರಭಾವ ಬೀರದು.
ಮಲ್ಲಿಕಾರ್ಜುನ್ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮೇಲೆ ಹಾಗೂ ರಾಹುಲ್ ಗಾಂಧಿ ಮತ್ತು ಅನೇಕ ಹಿರಿಯ ಹಾಗೂ ಕಿರಿಯ ಮುಖಂಡರ ಸಾಮೂಹಿಕ ನಾಯಕತ್ವದಲ್ಲಿ ಬಿಜೆಪಿಯ ಪತನ ಆರಂಭಗೊಂಡಿದೆ. ಇದು ಇನ್ನೂ ಮುಂದುವರಿಯಲಿದೆ ಎಂದು ರಮೇಶ್ ಕಾಂಚನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…