ಉಡುಪಿ : ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ : ಕುಯಿಲಾಡಿ ಸಂತಾಪ -Vishwanews24

Featured, ಉಡುಪಿ

ಉಡುಪಿ : ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ : ಕುಯಿಲಾಡಿ ಸಂತಾಪ -Vishwanews24

ಉಡುಪಿ : ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.

ಯೋಗಾಭ್ಯಾಸದಲ್ಲಿ ವಿಶೇಷ ಪರಿಜ್ಞಾನ ಹೊಂದಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಆಸ್ಕರ್ ಫೆರ್ನಾಂಡಿಸ್ ರವರು ಸ್ನೇಹಜೀವಿಯಾಗಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ ಹಾಗೂ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.