ಉಡುಪಿ: ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಯಾವುದೇ ಸರಕಾರ ಬಡವರಿಗೆ ನ್ಯಾಯವನ್ನು ಕೊಡುತ್ತಿರುವಾಗ ಇಲ್ಲಿಯವರೆಗೆ ಗ್ಯಾರಂಟಿ ಕಾರ್ಡ್‌ನ್ನು ಕೊಟ್ಟಿಲ್ಲ. ಗ್ಯಾರಂಟಿ ಕಾರ್ಡ್ ಕೊಡುತ್ತೇವೆ ಎಂಬುದರ ಅರ್ಥವೇನೆಂದರೆ ಜನ ತಮ್ಮನ್ನು ನಂಬುವುದಿಲ್ಲ ಎಂಬುದಾಗಿದೆ. ಈ ಕಾರಣಕ್ಕಾಗಿ ಕಾಂಗ್ರೆಸ್ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ವಾರಂಟಿ ಇಲ್ಲ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೂದಲಿಸಿದ್ದಾರೆ.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿಉಡುಪಿ ಪುರಭವನದಲ್ಲಿ ಭಾನುವಾರ ನಡೆದ ಚುನಾವಣಾ ನಿರ್ವಹಣಾ ಸಮಿತಿಯ ಜಿಲ್ಲಾಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜಾರಿಗೆ ತಂದಿರುವ ಭಾಗ್ಯಲಕ್ಷ್ಮೀ, ಸಂಧ್ಯಾ ಸುರಕ್ಷಾ ಮುಂತಾದ ಜನಪರ ಯೋಜನೆಗಳಿಗೆ ಯಾವುದೇ ಗ್ಯಾರಂಟಿ ಕಾರ್ಡ್ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿಗೆ ತಂದಿರುವ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗೆ ಕೇಂದ್ರದಿಂದ 6,000 ರೂ. ರಾಜ್ಯದಿಂದ 4,000 ರೂ. ನೇರ ನಗದು ವರ್ಗಾವಣೆ ಮಾಡುತ್ತಿರುವ ಬಗ್ಗೆ ಯಾವುದೇ ಗ್ಯಾರಂಟಿ ಕಾರ್ಡ್ ನೀಡಿಲ್ಲ. ಈ ಎಲ್ಲ ವಿಚಾರಗಳನ್ನು ಬಿಜೆಪಿ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಬೇಕಾದ ಅವಶ್ಯಕತೆ ಇದೆ ಎಂದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…