Featured

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ : ಕುತ್ಯಾರು ನವೀನ್ ಶೆಟ್ಟಿ- vishwanews24

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯ: ಬಿಜೆಪಿಯಿಂದ ತೀವ್ರ ಹೋರಾಟದ ಎಚ್ಚರಿಕೆ

ಉಡುಪಿ: ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯದಿಂದಾಗಿ ಜನ ಸಾಮಾನ್ಯರ ಗೋಳು ಕೇಳುವವರಿಲ್ಲ ವಾಗಿದೆ. ಉಡುಪಿ ಜಿಲ್ಲೆಯಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳಿಗೆ ತುರ್ತು ಸ್ಪಂದನೆ ನೀಡಬೇಕು. ಇಲ್ಲದಿದ್ದರೆ ಮುಂದಿನ ತಿಂಗಳು ಬಿಜೆಪಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದ್ದಾರೆ.

ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,2021ರಲ್ಲೇ ಪ್ರಾರಂಭಗೊಂಡ ಉಡುಪಿ ಜಿಲ್ಲಾಸ್ಪತ್ರೆ ಕಾಮಗಾರಿ ಮೂರು ವರ್ಷಗಳ ಹಿಂದೆಯೇ ಶೇ.90ರಷ್ಟು ಪೂರ್ಣಗೊಂಡಿತ್ತು. ಬಳಿಕ ಕುಂಟುತ್ತಾ ಸಾಗಿರುವ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಶೀಘ್ರ ಲೋಕಾರ್ಪಣೆಗೊಳಿಸುವ ಮೂಲಕ ಜನರ ಸೇವೆಗೆ ಲಭಿಸುವಂತಾಗ ಬೇಕು ಎಂದವರು ತಿಳಿಸಿದರು.

ಇದನ್ನೂ ಓದಿ :

ಸಾಮಾಜಿಕ ಭದ್ರತಾ ಯೋಜನೆಗಳಡಿ ನೀಡಲಾಗುತ್ತಿರುವ ಮಾಸಾಶನಕ್ಕೆ ಕುಟುಂಬದ ವಾರ್ಷಿಕ ಆದಾಯ ಮಿತಿ ಕೇವಲ 32,000ರೂ. ಎಂದು ನಿಗದಿ ಪಡಿಸಿರುವುದು ಸಂಪೂರ್ಣ ಅವೈಜ್ಞಾನಿಕ ಹಾಗೂ ಬಡವರ ವಿರೋಧಿ ನಿರ್ಧಾರವಾಗಿದ್ದು, ಇದರಿಂದ ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಲಕ್ಷಾಂತರ ಅರ್ಹ ಫಲಾನುಭವಿಗಳು ಯೋಜನೆಯ ಲಾಭದಿಂದ ವಂಚಿತರಾಗುತ್ತಿದ್ದಾರೆ. ಆದ್ದರಿಂದ ಆದಾಯ ಮಿತಿಯನ್ನು 1,20,000ರೂ.ಗಳಿಗೆ ಹೆಚ್ಚಿಸುವಂತೆ ಅವರು ಒತ್ತಾಯಿಸಿದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕಳೆದ ಮೂರು ವರ್ಷಗಳಿಂದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕೊರತೆಯ ನೆಪವೊಡ್ಡಿ ಜನ ಸಾಮಾನ್ಯರು ಸೇವೆ ಪಡೆಯಲು ಅಸಹಾಯಕರಾಗಿ ತಿಂಗಳು ಗಟ್ಟಲೆ ಅಲೆದಾಡುವ ಪರಿಸ್ಥಿತಿ ನಿತ್ಯ ನಿರಂತರವಾಗಿದೆ. ಸರಕಾರಕ್ಕೆ ಎಷ್ಟೇ ಮನವಿ ಸಲ್ಲಿಸಿದರೂ ಯಾವುದೇ ಪರಿಹಾರ ಕಂಡುಬಂದಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ :

ಬಡ ನಿವೇಶನ ರಹಿತರಿಗೆ ಜಿಲ್ಲಾಧಿಕಾರಿ ಹಕ್ಕುಪತ್ರ ನೀಡಿ ನಿವೇಶನ ಒದಗಿಸಿದ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಲು ಪರವಾನಿಗೆ ಲಭಿಸುತ್ತಿಲ್ಲ. 94ಸಿಸಿ ಕಾನೂನಿನಡಿ ಸರಕಾರದಿಂದ ಒಂದೆರಡು ಸೆನ್ಸ್ ಭೂಮಿ ಪಡೆದ ಬಡ ಕುಟುಂಬಗಳಿಗೂ ಮನೆ ನಿರ್ಮಾಣದ ಪರವಾನಿಗೆ ಲಭಿಸುತ್ತಿಲ್ಲ. ಇವುಗಳನ್ನು ಕೂಡಲೇ ಸರಿಪಡಿಸಬೇಕು ಎಂದವರು ಒತ್ತಾಯಿಸಿದರು.

ಈ ಎಲ್ಲಾ ಜ್ವಲಂತ ಸಮಸ್ಯೆಗಳಿಗೆ ಆದ್ಯತೆ ಮೇರೆಗೆ ತುರ್ತು ಪರಿಹಾರ ದೊರೆಯದೇ ಇದ್ದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಒಗ್ಗೂ ಡಿಸಿ ರಾಜ್ಯ ಸರಕಾರದ ವಿರುದ್ಧ ತೀವ್ರ ಸಂಘಟಿತ ಹೋರಾಟ ರೂಪಿಸಲಾಗುವುದು ಎಂದು ಕುತ್ಯಾರು ನವೀನ್ ಶೆಟ್ಟಿ ಮತ್ತು ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ವಕ್ತಾರ ದಿವಾಕರ ಶೆಟ್ಟಿ ಕಲ್ಯಾ, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ ಅಂಬಲಪಾಡಿ ಮತ್ತು ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಉಪಸ್ಥಿತರಿದ್ದರು.

ಇದನ್ನೂ ಓದಿ :

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago