Featured

ಉಡುಪಿ : ಕಾಂಗ್ರೆಸ್ ಸರಕಾರದ ವಿರುದ್ಧ ಎ.10ರಂದು  ಬಿಜೆಪಿ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ – vishwanews24

ಉಡುಪಿ :

ಎ.10ರಂದು ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ನೇತೃತ್ವದಲ್ಲಿ ಜನಾಕ್ರೋಶ ಯಾತ್ರೆ

ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯ ಅಂಗವಾಗಿ ಎ.6 ರಂದು ಜಿಲ್ಲೆಯ ಎಲ್ಲಾ 1,112 ಬೂತ್‌ಗಳಲ್ಲಿ ಮತ್ತು ಪಕ್ಷದ ಕಾರ್ಯಕರ್ತರ ಮನೆಗಳಲ್ಲಿ ಪಕ್ಷದ ಧ್ವಜಾರೋಹಣ ನಡೆಯಲಿದೆ. ಪಕ್ಷದ ಸೂಚನೆಯಂತೆ ಎ.10ರಂದು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ಯಾತ್ರೆ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಕಡಿಯಾಳಿಯಲ್ಲಿರುವ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಿಜೆಪಿ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ಜಿಲ್ಲೆ ಮತ್ತು ಮಂಡಲಗಳ ಮಟ್ಟದಲ್ಲಿ ಪಕ್ಷದ ಧ್ವಜಾರೋಹಣ ಹಾಗೂ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಎ.10ರಂದು ಬೆಳಿಗ್ಗೆ ಗಂಟೆ 9:30ಕ್ಕೆ ಜನಾಕ್ರೋಶ ಯಾತ್ರೆಯ ಬೃಹತ್ ಜಾಥಾ ಉಡುಪಿಯ ಪಾರ್ಕಿಂಗ್ ಏರಿಯಾ ಬಳಿ ಪ್ರಾರಂಭಗೊಂಡು ಕಲ್ಸಂಕ ಮಾರ್ಗವಾಗಿ ಸಾಗಿ ಕಡಿಯಾಳಿಯಲ್ಲಿ ಸಮಾಪನಗೊಳ್ಳಲಿದೆ ಎಂದರು.

ಬೆಳಗ್ಗೆ 10:30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ರಾಜ್ಯ ಮತ್ತು ಜಿಲ್ಲಾ ನಾಯಕರು, ಜಿಲ್ಲೆಯ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ಸಮಾಗಮದೊಂದಿಗೆ ಬೃಹತ್ ಜನಾಕ್ರೋಶ ಸಮಾವೇಶ ನಡೆಯಲಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಜನಾಕ್ರೋಶ ಯಾತ್ರೆಯನ್ನು ಯಶಸ್ವಿಗೊಳಿಸಬೇಕು ಎಂದವರು ಕರೆ ನೀಡಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ ಹಾಗೂ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಸುರೇಶ್ ಶೆಟ್ಟಿ ಕಾಡೂರು, ಮಹಾವೀರ ಹೆಗ್ಡೆ, ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕೋಶಾಧಿಕಾರಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಶ್ರೀಕಾಂತ್ ನಾಯಕ್, ಪ್ರಿಯದರ್ಶಿನಿ ದೇವಾಡಿಗ, ಶಿವಕುಮಾರ್ ಅಂಬಲಪಾಡಿ, ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಗಿರೀಶ್ ಎಂ. ಅಂಚನ್ ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago