Featured

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್

ಉಡುಪಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಹೇಳಿದರು.

ಬ್ರಹ್ಮಾವರ ಕೊಕ್ಕರ್ಣೆಯಲ್ಲಿ ಆಯೋಜಿಸಿದ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ “ಪಂಚ ಗ್ಯಾರಂಟಿ ಯೋಜನೆಯ ಸಮಾವೇಶ”ದಲ್ಲಿ ಅವರು ಮಾತನಾಡಿದರು. ನಾನು ಸೋತವ, ವಿಧಾನಸಭೆಗೆ ಪ್ರವೇಶಿಸಲು ನನಗೆ ನೀವೇ ಅಧಿಕಾರ ಕೊಡಲಿಲ್ಲ. ಆದರೂ ಹೊಳೆಬೈಲಿನ ಗ್ರಾಮಸ್ಥರು ಶೌಚಾಲಯ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿ ಶೌಚಾಲಯ ನಿರ್ಮಿಸಿಕೊಡುವ ಭರವಸೆ ನೀಡಿದೆ. ನಾನು ಶೌಚಾಲಯ ನಿರ್ಮಿಸಿಕೊಡುವ ವಿಷಯ ಉಡುಪಿ ಶಾಸಕರಿಗೆ ಗೊತ್ತಾಗಿ, ಪ್ರಸಾದ್ ಹತ್ತಿರ ಹಣ ತೆಗೆದುಕೊಳ್ಳಬೇಡಿ ನಾವೇ ಶೌಚಾಲಯ ನಿರ್ಮಾಣ ಮಾಡ್ತೇವೆಂದು ಗ್ರಾಮಸ್ಥರಿಗೆ ಭರವಸೆ ನೀಡಿದ್ರು. ಆದರೆ, ಮರಳು ಬಂದು ಬಿತ್ತೆ ವಿನಾಃ ಶೌಚಾಲಯ ಮಾತ್ರ ನಿರ್ಮಾಣ ಆಗಲೇ ಇಲ್ಲ. ಮತ್ತೆ ಗ್ರಾಮಸ್ಥರು ವಿನಂತಿ ಮಾಡಿದರು. ಆಗ ನನ್ನ ಸ್ವಂತ ಖರ್ಚಿನಿಂದ ಹೊಳೆಬೈಲಿನಲ್ಲಿ ಶೌಚಾಲಯ ನಿರ್ಮಿಸಿಕೊಟ್ಟಿದ್ದೇನೆ ಎಂದರು.

ಇದನ್ನೂ ಓದಿ:

ಭಾರತ ದೇಶದ ಬಜೆಟ್ ಗಾತ್ರ 48.50 ಲಕ್ಷ ಕೋಟಿ ರೂ. ಅದರಲ್ಲಿ ಎಷ್ಟು ಸೊನ್ನೆ ಇದೆಯೆಂದು ಮೋದಿಗೆ ಗೊತ್ತಿರಲಿಕ್ಕಿಲ್ಲ. ಇದರಲ್ಲಿ ಎರಡು ಲಕ್ಷ ರೂ. ಅನುದಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಿಸಲು ಆಗುವುದಿಲ್ಲವೇ. 4 ಲಕ್ಷ ಕೋಟಿ ರೂ. ರಾಜ್ಯದ ಬಜೆಟ್ ಗಾತ್ರ. ಅದರಲ್ಲಿ ಎರಡು ಲಕ್ಷ ರೂ. ಅನುದಾನ ತರಲು ಉಡುಪಿ ಶಾಸಕರಿಗೆ ಆಗುವುದಿಲ್ಲವೇ?. ಹಾಗಿದ್ದರೆ ಇವರು ಯಾವ ಎಂಎಲ್ ಎ. ಬಿಜೆಪಿಯ ಎಂಪಿ, ಎಂಎಲ್ಎಗಳು ಜನರಿಗೆ ಮೋಸ ಮಾಡುತ್ತಿದ್ದಾರೆ. ಜನರ ತೆರಿಗೆ ಹಣವನ್ನು ಲೂಟಿ ಹೊಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮುಂದಿನ ಜಿಪಂ, ತಾಪಂ ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಡುತ್ತೇವೆ ಎಂಬ ಗ್ಯಾರಂಟಿಯನ್ನು ನನಗೆ ಕೊಡಿ. ಆರು ತಿಂಗಳೊಳಗೆ ನಿಮ್ಮ ಗ್ರಾಮವನ್ನು ರಾಮರಾಜ್ಯವಾಗಿ ಮಾಡುತ್ತೇವೆ. ಇದು ನನ್ನ ವೈಯಕ್ತಿಕ ಗ್ಯಾರಂಟಿ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷ ವಿನಯಕುಮಾರ್ ಸೊರಕೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಬಗ್ಗೆ ಬಿಜೆಪಿ ಪಕ್ಷದವರು ಸಾಕಷ್ಟು ಅಪಪ್ರಚಾರ ನಡೆಸಿದರು. ಆದರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಿ ಜನರ ಬದುಕನ್ನು ಬದಲಿಸುವ ಕೆಲಸ ಮಾಡಿದೆ. ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ ಎಂದರು.

ಇದನ್ನೂ ಓದಿ:

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿದರು.

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ ಅಧ್ಯಕ್ಷತೆ ವಹಿಸಿದ್ದರು.

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಮುಖಂಡರಾದ ಡಾ. ಸುನೀತಾ ಶೆಟ್ಟಿ, ಡಾ. ಸಂತೋಷ್ ಕುಮಾರ್ ಭೈರಂಪಳ್ಳಿ, ಸುದೇಶ್ ಶೆಟ್ಟಿ, ನಾರಾಯಣ ಮರಕಾಲ, ವೆಂಕಟೇಶ ಸುವರ್ಣ, ನರಸಿಂಹ ಪೂಜಾರಿ, ಕುಮಾರ್ ಸುವರ್ಣ, ಉದಯ ಆಚಾರ್ಯ, ಮಾಧವ ನಾಯ್ಕ್, ಅಬು ಸಾಹೇಬ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago