ಉಡುಪಿ: ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟು, ಅವರ ಪುತ್ರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.
ಮೃತರನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಯಿ ಮತ್ತು ಮಗ ಚಲಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ಹೆಲೆನ್ ಅವರಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…