Featured

ಉಡುಪಿ:  ಕಾಂಪೌಂಡ್ ಗೋಡೆಗೆ ಸ್ಕೂಟರ್ ಡಿಕ್ಕಿ; ತಾಯಿ ಸಾವು, ಪುತ್ರನಿಗೆ ಗಂಭೀರ ಗಾಯ – vishwanews24

ಉಡುಪಿ:  ಕಾಂಪೌಂಡ್ ಗೋಡೆಗೆ ಸ್ಕೂಟರ್ ಡಿಕ್ಕಿ; ತಾಯಿ ಸಾವು, ಪುತ್ರನಿಗೆ ಗಂಭೀರ ಗಾಯ

ಉಡುಪಿ: ನಿಯಂತ್ರಣ ತಪ್ಪಿದ ಸ್ಕೂಟರ್ ರಸ್ತೆ ಬದಿಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟು, ಅವರ ಪುತ್ರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಿಟ್ಟೂರು ಸಮೀಪ ಶುಕ್ರವಾರ ಸಂಜೆ ಸಂಭವಿಸಿದೆ.

ಮೃತರನ್ನು ಕಟಪಾಡಿ ಮೂಲದ ಹೆಲೆನ್ ಸೋನ್ಸ್ (50) ಎಂದು ಗುರುತಿಸಲಾಗಿದೆ. ಸ್ಕೂಟರ್ ಚಲಾಯಿಸುತ್ತಿದ್ದ ಅವರ ಪುತ್ರ ಶೆರ್ವಿನ್ (20) ಗಂಭೀರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಯಿ ಮತ್ತು ಮಗ ಚಲಿಸುತ್ತಿದ್ದ ಸ್ಕೂಟರ್ ನಿಟ್ಟೂರು ರಸ್ತೆ ಬದಿಯಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನದ ಕಾಂಪೌಂಡ್ ಗೋಡೆಗೆ ವೇಗವಾಗಿ ಅಪ್ಪಳಿಸಿದೆ. ಅಪಘಾತದ ರಭಸಕ್ಕೆ ಸ್ಕೂಟರ್‌ನ ಹಿಂಬದಿ ಕುಳಿತಿದ್ದ ಹೆಲೆನ್ ಅವರಿಗೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago