ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದು, ‘ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ವಿ. ಸುನಿಲ್ ಕುಮಾರ್ ಆರೋಪಿಸಿದರು.
‘ಕಾಕ್ರೋಚ್’ ಹಾಗೂ ಕಾಂಗ್ರೆಸ್ ಬೆಂಬಲಿತರು ದೇಶದಲ್ಲಿ ಅರಾಜಕತೆ ಸೃಷ್ಟಿಸುತ್ತಿದ್ದು, ಗೂಂಡಾ ಸಂಸ್ಕೃತಿ ಮತ್ತು ದೇಶವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಜಟ್ಕಾ ಸ್ಟ್ಯಾಂಡ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಹಿಂದೂ ಧರ್ಮದ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸುವ ಮೂಲಕ ದೇಶವನ್ನು ಅವಮಾನಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ದೂರಿದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಯಾವುದೇ ಸರ್ಕಾರ ಸಮರ್ಥಿಸಿಲ್ಲ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಮರುಪರೀಕ್ಷೆ ನಡೆಸಲಾಗಿತ್ತು. ಆದರೆ, ಇಂತಹ ಘಟನೆಗಳನ್ನು ನೆಪವಾಗಿಸಿಕೊಂಡು ದೇಶದ ವಿರುದ್ಧ ವಾತಾವರಣ ನಿರ್ಮಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕಿಡಿಕಾರಿದರು.
ಪ್ರಧಾನಿ ಮೋದಿ ಅಧಿಕಾರ ಅವಧಿಯಲ್ಲಿ ಭಾರತ ದೇಶದ ಪ್ರತಿಷ್ಠೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗಿದೆ. ಆದರೆ, ದೇಶವನ್ನು ದುರ್ಬಲಗೊಳಿಸುವ ಉದ್ದೇಶದಿಂದ ಕೆಲವು ಶಕ್ತಿಗಳು ಕಾರ್ಯನಿರ್ವಹಿಸುತ್ತಿವೆ. ಕಾಂಗ್ರೆಸ್‌ಗೆ ಚುನಾವಣಾ ವ್ಯವಸ್ಥೆ, ಸಂಸತ್ತು ಹಾಗೂ ಕಾನೂನಿನ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದರು.
ಸಮಾಜವಿರೋಧಿ ಹಾಗೂ ವಿದೇಶಿ ಶಕ್ತಿಗಳೊಂದಿಗೆ ಕೈಜೋಡಿಸುವ ದೇಶವಿರೋಧಿ ಚಟುವಟಿಕೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯಾದಾಗ ಮುಸ್ಲಿಮರನ್ನು ಎತ್ತಿಕಟ್ಟುವ ಪ್ರಯತ್ನ ನಡೆದಿತ್ತು. ಸರ್ಜಿಕಲ್ ಸ್ಟ್ರೈಕ್ ಮತ್ತು ‘ಆಪರೇಷನ್ ಸಿಂಧೂರ್’ ಸಂದರ್ಭದಲ್ಲಿಯೂ ಭಾರತೀಯ ಸೇನೆಯ ಕಾರ್ಯಾಚರಣೆಯನ್ನು ಪ್ರಶ್ನಿಸಲಾಗಿತ್ತು. ಇದೇ ರೀತಿಯ ಮನೋಭಾವದವರು ಈಗ ‘ಕಾಕ್ರೋಚ್’ ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಚಳವಳಿಯ ಹೆಸರಿನಲ್ಲಿ ಸೈನಿಕರ ಮೇಲೆ ಕಲ್ಲು ತೂರಾಟ ಹಾಗೂ ಪೊಲೀಸರ ಮೇಲೆ ದಾಳಿ ನಡೆಸುವುದನ್ನು ಭಾರತೀಯ ಸಮಾಜ ಒಪ್ಪುವುದಿಲ್ಲ. ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಧಾನಿ ಮೋದಿ ಹಾಗೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಭಾಷೆ ಬಳಸಲಾಗಿದೆ ಎಂದು ಆರೋಪಿಸಿದ ಅವರು, ಇಂತಹ ಪ್ರತಿಭಟನೆಗಳ ಉದ್ದೇಶವೇ ದೇಶದಲ್ಲಿ ಅಶಾಂತಿ ಸೃಷ್ಟಿಸುವುದಾಗಿದೆ ಎಂದು ಹೇಳಿದರು.
ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎ. ಕಿರಣ್ ಕುಮಾರ್ ಕೊಡ್ಗಿ, ಗುರುರಾಜ ಗಂಟಿಹೊಳೆ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಟ್ಟಾರು ರತ್ನಾಕರ್ ಹೆಗ್ಡೆ, ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್ ಅಲೆವೂರು, ದಿನಕರ್ ಬಾಬು, ಸುರೇಶ್ ನಾಯಕ್ ಕುಯಿಲಾಡಿ, ಲಾಲಾಜಿ ಆರ್. ಮೆಂಡನ್, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶ್ಯಾಮಲ್ ಎಸ್. ಕುಂದರ್ ಉಪಸ್ಥಿತರಿದ್ದರು.
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…
ಅಕ್ಟೋಬರ್‌ನಲ್ಲಿ ಮಂಗಳೂರು - ಕುವೈಟ್ ನೇರ ವಿಮಾನ ಆರಂಭ ಮಂಗಳೂರು: ಯುದ್ಧದಿಂದಾಗಿ 6 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕುವೈಟ್ ನೇರ…
ಮೂಡುಬಿದಿರೆ: ಬಿಜೆಪಿ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ ಮೂಡುಬಿದಿರೆ: ಬಿಜೆಪಿ ಮೂಲ್ಕಿ ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ಸಕ್ರಿಯರಾಗಿದ್ದ ಯುವ…
ತುಳು ಬೆನ್ನಲ್ಲೇ ಉರ್ದುಗೂ ಅಧಿಕೃತ ಭಾಷಾ ಸ್ಥಾನಮಾನಕ್ಕೆ ಆಗ್ರಹ: ಮುಖ್ಯಮಂತ್ರಿ SDPI ರಾಜ್ಯಾಧ್ಯಕ್ಷ ಪತ್ರ ಮೈಸೂರು: ಇತ್ತೀಚಿಗೆ ಮಂಗಳೂರಿನ ಜಿಲ್ಲಾಧಿಕಾರಿ…
ಸೌಜನ್ಯಾ ಪ್ರಕರಣ ಮರು ತನಿಖೆ ಸುಪ್ರೀಂ ಆದೇಶಕ್ಕೆ ಶ್ರೀ ಕ್ಷೇತ್ರ ಸ್ವಾಗತ ; ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಹೊಸದಿಲ್ಲಿ: ಉಜಿರೆ…