Featured

ಉಡುಪಿ: ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಜರುಗಿಸಿ: ಅರಣ್ಯ ಸಚಿವರಿಗೆ ಮನವಿ  -Vishwanews24

ಉಡುಪಿ: ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಕ್ರಮ ಜರುಗಿಸಿ: ಅರಣ್ಯ ಸಚಿವರಿಗೆ ಮನವಿ  -Vishwanews24

ಉಡುಪಿ: ಸೋಮೇಶ್ವರ ಅಭಯಾರಣ್ಯ ಪ್ರದೇಶದಿಂದ ಬರುವ ಕಾಡು ಪ್ರಾಣಿಗಳಿಂದ ರೈತರು ಬೆಳೆದ ಕೃಷಿಗೆ ಹಾನಿ ಉಂಟಾಗುತ್ತಿದ್ದು ಕಾಡು ಪ್ರಾಣಿಗಳ ಹಾವಳಿ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳಲು ಅರಣ್ಯ ಸಚಿವರಲ್ಲಿ ಶಾಸಕ ರಘುಪತಿ ಭಟ್ ಮನವಿ ಮಾಡಿದರು.

ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಅರವಿಂದ ಲಿಂಬಾವಳಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅರಣ್ಯ ಇಲಾಖೆಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಶೀಘ್ರದಲ್ಲಿ ಪರಿಹಾರ ಒದಗಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾರ್ಕಳ ಕ್ಷೇತ್ರದ ಶಾಸಕರಾದ ವಿ ಸುನೀಲ್ ಕುಮಾರ್, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಕುಂದಾಪುರ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಬೈಂದೂರು ಕ್ಷೇತ್ರದ ಶಾಸಕರಾದ ಸುಕುಮಾರ್ ಶೆಟ್ಟಿ ಮತ್ತು ಸಹಾಯಕ ಆಯುಕ್ತರಾದ ರಾಜು ಕೆ, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು, ಜಿಲ್ಲಾ ಅರಣ್ಯಾಧಿಕಾರಿಗಳಾದ ಆಶಿಶ್ ರೆಡ್ಡಿ ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago