ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು : ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ
ಉಡುಪಿ: ಕಾನೂನು ಕೈಗೆತ್ತಿಕೊಂಡವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ ಆಗ್ರಹಿಸಿದ್ದಾರೆ.
ಬೆಂಗಳೂರಿನ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿಯಲ್ಲಿ ನಡೆದ ಗಲಭೆ, ನೀಚ ಕೃತ್ಯವನ್ನು ಖಂಡಿಸುತ್ತೇನೆ. ಬೆಂಗಳೂರಿನ ಕಾವಲ್ ಸಂದ್ರ ಪೊಲೀಸ್ ವಸತಿಗೃಹದ ಗೇಟ್ ಮುರಿದು ಪೊಲೀಸರ ಮನೆಗಳಿಗೆ ನುಗ್ಗಿ ಮಕ್ಕಳ, ಮಹಿಳೆಯರ ಮೇಲೆ ಹಲ್ಲೆ ಮಾಡಲು ಮುಂದಾದ ಕಿಡಿಗೇಡಿಗಳ ಮೇಲೆ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಬೇಕು .ಕೈಯಲ್ಲಿ ಮಾರಕಾಯುಧಗಳನ್ನು ಹಿಡಿದು ಬಂದ ಮತಾಂಧ ಉಗ್ರರು ಪೊಲೀಸರ ವಾಹನಗಳನ್ನು ಪುಡಿ ಮಾಡಿ, ಬೆಂಕಿ ಹಚ್ಚಿ, ಪೊಲೀಸ್ ಠಾಣೆಗಳ ಮೇಲೆ ದಾಳಿ ಮಾಡಿದ್ದು ಅಂತಹ ನೀಚರು ಈ ಭೂಮಿಯ ಮೇಲೆ ಬದುಕುವುದಕ್ಕೆ ಅರ್ಹರಲ್ಲ.
ಈ ಘಟನೆಯಿಂದ ಆದ ಹಾನಿಗಳನ್ನು ಹಾಗೂ ನಷ್ಟಗಳನ್ನು, ಘಟನೆಗೆ ಪ್ರಚೋದನೆ ನೀಡಿದ ಮತ್ತು ಈ ಘಟನೆಯಲ್ಲಿ ಭಾಗಿಯಾದವರಿಂದಲೆ ಬರಿಸುವ ಕೆಲಸ ವನ್ನು ಪೋಲೀಸ್ ಇಲಾಖೆ ಮತ್ತು ಕಾನೂನಿನ ಮೂಲಕ ಮಾಡಬೇಕು. ಆ ಘಟನೆಯನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿದ ರಾಜ್ಯ ಪೊಲೀಸ್ ಇಲಾಖೆ ಮತ್ತು ರಾಜ್ಯ ಗೃಹ ಸಚಿವರಾದ ಬಸವರಾಜ ಬೊಮ್ಮಯಿರವರು ಹಾಗೂ ಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪ ಜೀ ರವರಿಗೆ ಅಭಿನಂದನೆಗಳು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…