Featured

ಉಡುಪಿ: ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾ ದಂಧೆ ಕಡಿವಾಣಕ್ಕೆ ಜಿಲ್ಲಾ ಬಿಜೆಪಿ ಒತ್ತಾಯ – Vishwanews24

ಉಡುಪಿ: ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾ ದಂಧೆ ಕಡಿವಾಣಕ್ಕೆ ಜಿಲ್ಲಾ ಬಿಜೆಪಿ ಒತ್ತಾಯ

ಉಡುಪಿ: ಜಿಲ್ಲೆಯಲ್ಲಿ ಮಣಿಪಾಲ ಪರಿಸರದಲ್ಲಿ ಮಧ್ಯರಾತ್ರಿಯ ನಂತರವೂ ಯಾವುದೇ ಪರವಾನಿಗೆ ಇಲ್ಲದೆ ಪಬ್ಬುಗಳು ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಕ್ಲಬ್, ಪಬ್, ಮಟ್ಕಾದಂಧೆ ನಿಲ್ಲಿಸಲು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್‌ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯವರನ್ನು ಒತ್ತಾಯಿಸಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ರಿಕ್ರಿಯೇಷನ್‌ ಕ್ಲಬ್‌ನ ಹೆಸರಿನಲ್ಲಿ ಅವ್ಯಹತವಾಗಿ ಇಸ್ಪಿಟ್ ಕ್ಲಬ್‌ಗಳು ದಿನದ 24 ಗಂಟೆಯೂ ತೆರೆದಿರುವುದು ಜಗತ್‌ಜಾಹೀರವಾಗಿದ್ದು, ನಮ್ಮ ಗಮನಕ್ಕೆ ಬಂದಿರುತ್ತದೆ. ಅಬಕಾರಿ ಇಲಾಖೆಯ ಸಿಎಲ್ 7 ಮತ್ತು ಸಿಎಲ್ 9 ಬಳಸಿಕೊಂಡು ಪಬ್ಬುಗಳಲ್ಲಿ ಮತ್ತು ಡಿಸ್ಕೋಗಳಲ್ಲಿ ಡಿಜೆ ಮ್ಯೂಸಿಕ್ ಬಳಸಿ ನಡೆಸುತ್ತಿದ್ದು, ಸದ್ರಿ ಚಟುವಟಿಕೆಗಳು ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅಬಕಾರಿ ಇಲಾಖೆಯ ಕಾನೂನಿನಂತೆ ಬಾರ್ ಮತ್ತು ರೆಸ್ಟೋರೆಂಟ್‌ನ ನಿಗದಿತ ಮುಕ್ತಾಯ ಅವಧಿಯ ನಂತರವೂ ಕೆಲವೊಂದು ಬಾರ್ ಮತ್ತು ರೆಸ್ಟೋರೆಂಟ್‌ಗಳು ತನ್ನ ವ್ಯವಹಾರವನ್ನುಯಾವುದೇ ಅಳುಕು ಇಲ್ಲದೆ ನಡೆಸಿಕೊಂಡು ಬಂದಿರುತ್ತದೆ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿರುತ್ತದೆ.

ಮಣಿಪಾಲದ ಡಿಸಿ ಕಛೇರಿ ರಸ್ತೆಯಲ್ಲಿರುವ ಕೆಲವು ರೆಸ್ಟೋರೆಂಟ್‌ಗಳು ಮುಂಜಾನೆ 3 ಗಂಟೆಯವರೆಗೂತೆರೆದಿರುತ್ತದೆ. ಮಣಿಪಾಲದ ಬಾರ್ ಮತ್ತು ರೆಸ್ಟೋರೆಂಟ್‌ಗಳು ಹಾಗೂ ಮುಂಜಾನೆವರೆಗೂ ತೆರೆದಿರುವ ರೆಸ್ಟೋರೆಂಟ್‌ಗಳು ಡ್ರಗ್ಸ್ ಸೇವನೆಯ ಅಡ್ಡೆಯಾಗಿರುತ್ತದೆ. ಮಣಿಪಾಲವು ಡ್ರಗ್ಸ್ ಕೇಂದ್ರವಾಗಿ ಬೆಳೆಯುತ್ತಿರುವುದು ಸ್ಥಳೀಯ ವಿದ್ಯಾರ್ಥಿಗಳು, ಸ್ಥಳೀಯ ಯುವಜನತೆ ಮತ್ತು ಹೊರ ಊರಿನಿಂದ ಮತ್ತು ಹೊರದೇಶಗಳಿಂದ ವಿದ್ಯಾಭ್ಯಾಸಕ್ಕಾಗಿ ಬರುವ ಯುವಜನತೆಯ ಡ್ರಗ್ಸ್ನ ಹಾವಳಿಗೆ ದಾಸರಾಗಿರುತ್ತಾರೆ.

ಆದುದರಿಂದ ಉಡುಪಿ ಮತ್ತು ಮಣಿಪಾಲದಲ್ಲಿ ಕಾನೂನು ಬಾಹಿರವಾಗಿಕಾರ್ಯನಿರ್ವಹಿಸುತ್ತಿರುವ ಪಬ್ಬುಗಳು, ಕ್ಲಬ್ಬುಗಳು ಮತ್ತು ಅವಧಿ ಮೀರಿ ವ್ಯವಹಾರ ನಡೆಸುವ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಮುಂಜಾನೆವರೆಗೂ ತೆರೆದಿರುವ ರೆಸ್ಟೋರೆಂಟ್‌ನ ವಿರುದ್ಧ ಮತ್ತು ಜಿಲ್ಲೆಯಲ್ಲಿ ನಡೆಯುತ್ತಿರುವ ವ್ಯಾಪಕ ಮಟ್ಕಾದಂಧೆಯನ್ನು ನಿರ್ದ್ಯಾಕ್ಷಿಣ್ಯವಾಗಿ ನಿಲ್ಲಿಸಬೇಕೆಂದು ಎಂದು ಪತ್ರಿಕಾ ಪ್ರಕಟನೆಯ ಮೂಲಕ ಒತ್ತಾಯಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago