ಉಡುಪಿ: ಕಾನೂನು ವಿದ್ಯಾರ್ಥಿಗಳಿಬ್ಬರು ಉಡುಪಿ ನಗರ ಸಂಚಾರ ಠಾಣೆಯ ಎಸ್ಸೈ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ಮೇ 16ರಂದು ರಾತ್ರಿ ಕಲ್ಸಂಕ ಸಮೀಪ ನಡೆದಿದೆ.
ಆರೋಪಿಗಳನ್ನು ಶ್ರೀವತ್ಸ ಮತ್ತು ಗಣೇಶ್ ಪೂಜಾರಿ ಎಂದು ಗುರುತಿಸಲಾಗಿದೆ.
ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಕಡೆಯಿಂದ ಕಲ್ಸಂಕ ಕಡೆ ಬೈಕ್ನಲ್ಲಿ ಹೆಲ್ಮೆಟ್ ಧರಿಸದೆ ಮೊಬೈಲ್ನಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿಯನ್ನು ಉಡುಪಿ ಸಂಚಾರ ಪೊಲೀಸ್ ಠಾಣೆಯ ಎಸ್ಸೈ ಸುದರ್ಶನ್ ದೊಡ್ಡಮನಿ ನಿಲ್ಲಿಸಿ, ದಂಡ ಪಾವತಿಸುವಂತೆ ಸೂಚಿಸಿದರು. ಅದಕ್ಕೆ ಸವಾರ ನೋಟೀಸ್ ನೀಡುವಂತೆ ತಿಳಿಸಿದನು.
ಆಗ ಎಸ್ಸೈ ದಾಖಲಾತಿ ತೋರಿಸಲು ಹೇಳಿದಾಗ ಆತ ನಿರಾಕರಿಸಿದ ಎನ್ನಲಾಗಿದೆ. ಬಳಿಕ ಬುಲೆಟ್ನಲ್ಲಿ ಮತ್ತೊಬ್ಬ ಬಂದು ‘ದಂಡ ಹಾಕುತ್ತೀಯಾ’ ಎಂದು ಏರುಧ್ವನಿಯಲ್ಲಿ ಮಾತಾನಾಡುತ್ತಾ ಮೈಮೇಲೆ ಏರಿಬಂದಿದ್ದು, ಇಬ್ಬರೂ ಸೇರಿ ‘ನಾವು ಕಾನೂನು ವಿದ್ಯಾರ್ಥಿಗಳು ನಮಗೂ ಕಾನೂನು ಗೊತ್ತು’ ಎಂದು ವಿಡಿಯೋ ಮಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವುದಾಗಿ ದೂರಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…