ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಮೂಲದ ಉಪ್ಪಿನಂಗಡಿಯ 21 ವರ್ಷದ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತೆಯನ್ನು ಉಪ್ಪಿನಂಗಡಿ ಮೂಲದ ಶಫೀರಾ (21) ಎಂದು ಗುರುತಿಸಲಾಗಿದೆ.
ಬಂಧಿತೆಯು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಬಂಧಿತೆ ಶಫೀರಾ ಮೇಲಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ.
ಈ ಗರುಡ ಗ್ಯಾಂಗ್‌ನ ಸದಸ್ಯರು ಕೆಲ ದಿನಗಳ ಹಿಂದೆ ಉಡುಪಿ-ಮಣಿಪಾಲ ಹೆದ್ದಾರಿಯಲ್ಲಿ ರಸ್ತೆಗಿಳಿದು ಕೊಲೆಗೆ ಯತ್ನಿಸಿದ್ದರು. ನಗರದಲ್ಲಿ ತಡರಾತ್ರಿ ಕತ್ತಿ ಮತ್ತಿತರ ಆಯುಧಗಳೊಂದಿಗೆ ಬೀದಿ ಕಾಳಗ ನಡೆಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…