Featured

ಉಡುಪಿ: ಕಾಮಗಾರಿ ನೆಪದಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ ಅಗೆದು ಹೊಸ ರಸ್ತೆ ನಿರ್ಮಾಣ – ಸಾರ್ವಜನಿಕರ ಆಕ್ರೋಶ – Vishwanews24

ಉಡುಪಿ: ಕಾಮಗಾರಿ ನೆಪದಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ ಅಗೆದು ಹೊಸ ರಸ್ತೆ ನಿರ್ಮಾಣ, ಸಾರ್ವಜನಿಕರ ಆಕ್ರೋಶ

ಉಡುಪಿ: ಶಾರದಾ ಕಲ್ಯಾಣ ಮಂಟಪದಿಂದ ಬೀಡಿನಗುಡ್ಡೆ ಸಂಪರ್ಕಿಸುವ ಮುಖ್ಯ ಕಾಂಕ್ರೀಟ್ ರಸ್ತೆಯನ್ನು ಕಾಮಗಾರಿಯ ನೆಪದಲ್ಲಿ ಸುವ್ಯವಸ್ಥೆಯಲ್ಲಿದ್ದ ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆಯನ್ನು ಅಗೆಯುತ್ತಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹತ್ತಿಂಚು ದಪ್ಪ, ಕಬ್ಬಿಣದ ಸರಳು ಅಳವಡಿಸಿ, ಕೆಲವು ಸಮಯದ ಹಿಂದೆ ಹೊಸದಾಗಿ ನಿರ್ಮಾಣ ಮಾಡಿರುವ ಕಾಂಕ್ರೀಟ್ ರಸ್ತೆ ಇದು. ಯಾವುದೇ ಹೊಂಡಗುಂಡಿಗಳಿಲ್ಲದೆ ಸುಸ್ಥಿತಿಯಲ್ಲಿತ್ತು, ಮತ್ತಷ್ಟು ವರ್ಷಗಳು ಬಾಳಿಕೆ ಬರುವ ರಸ್ತೆ ಇದಾಗಿತ್ತು. ಇಂತಹ ರಸ್ತೆಯನ್ನು ವಿನಾಕಾರಣ ಅಗೆದು, ಹೊಸದಾಗಿ ಕಳಪೆ ಗುಣಮಟ್ಟದಲ್ಲಿ ನಿರ್ಮಾಣ ಮಾಡುತ್ತಿರುವುದು ಖಂಡನೀಯ. ಕಳೆದ ಎಂಟು ತಿಂಗಳ ಹಿಂದೆಯಷ್ಟೆ ನಿರ್ಮಾಣ ಮಾಡಿರುವ ರಸ್ತೆಯನ್ನು ಅಗೆದು ಹಾಳುಗೆಡವಲಾಗಿದೆ. ಈ ರೀತಿ ಸಾರ್ವಜನಿಕರ ಹಣವನ್ನು ವ್ಯರ್ಥಗೊಳಿಸುವ ಕುಕೃತ್ಯ ಆಡಳಿತ ವ್ಯವಸ್ಥೆಗಳಿಂದ ನಡೆಯುತ್ತಿದೆ. ಆದಷ್ಟು ಬೇಗ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಸಂಬಂಧಪಟ್ಟ ಇಲಾಖೆಯಲ್ಲಿ ಸಮಾಜಸೇವಕ ನಿತ್ಯಾನಂದ ಒಳಕಾಡು ಆಗ್ರಹಿಸಿದ್ದಾರೆ.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago