ಉಡುಪಿ: ಕೊಂಕಣ ರೈಲು ಮಾರ್ಗದ ನಂದಿಕೂರು ರೈಲ್ವೆ ನಿಲ್ದಾಣದಲ್ಲಿ ಕೆಲವು ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ಡಿ.14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಡಿ.13ರ ಶುಕ್ರವಾರ ಬೆಳಗ್ಗೆ 7:10ರಿಂದ 9:40ವರೆಗೆ ಎರಡೂವರೆ ಗಂಟೆಗಳ ಕಾಲ ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್‌ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 10 ನಿಮಿಷ ವಿಳಂಬವಾಗಲಿದೆ.
ಡಿ.14ರ ಶನಿವಾರ ಬೆಳಗ್ಗೆ 7:30ರಿಂದ 9:50ರವರೆಗೆ 2ಗಂಟೆ 20 ನಿಮಿಷ ಕಾಲ ರೈಲು ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್‌ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 20 ನಿಮಿಷ ವಿಳಂಬವಾಗಲಿದೆ. ಪ್ರಯಾಣಿಕರು ಕೊಂಕಣ ರೈಲ್ವೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…