Featured

ಉಡುಪಿ : ಕಾಮಗಾರಿ ಹಿನ್ನೆಲೆ – ವಾಹನ ಸಂಚಾರ ಬಂದ್ – vishwanews24

ಉಡುಪಿ : ಕಾಮಗಾರಿ ಹಿನ್ನೆಲೆ – ವಾಹನ ಸಂಚಾರ ಬಂದ್

ಉಡುಪಿ: ತಾಲೂಕಿನ ಅಂಬಾಗಿಲು-ಮಣಿಪಾಲ-ಉದ್ಯಾವರ- ಮಲ್ಪೆ ಜಿಲ್ಲಾ ಮುಖ್ಯರಸ್ತೆಯಲ್ಲಿ ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮದ ಬಳಿಯ ಸುಮಾರು 250 ಮೀ. ಉದ್ದದ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ನಡೆಸಲು ನಿರ್ಧರಿಸಿರುವುದರಿಂದ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಅಂಬಾಗಿಲು- ಪೆರಂಪಳ್ಳಿ- ಮಣಿಪಾಲ ರಸ್ತೆಯ ವಾಹನ ಸಂಚಾರವನ್ನು 2026ರ ಫೆಬ್ರವರಿ 21ರವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಸಂಬಂಧ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ನೀಡಿದ ವರದಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರ ಅಭಿಪ್ರಾಯದಂತೆ ಈ ಮಾರ್ಗದ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶದಲ್ಲಿ ಸೂಚಿಸಲಾಗಿದೆ. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಫೆ.21ರವರೆಗೆ ಅಂಬಾಗಿಲು- ಪೆರಂಪಳ್ಳಿಯಲ್ಲಿರುವ ಭಾರತೀಯ ಆಹಾರ ನಿಗಮ- ಸಗ್ರಿನೊಳೆ- ಇಂದ್ರಾಳಿ- ಮಣಿಪಾಲ ರಸ್ತೆ ಮುಖಾಂತರ ಸಂಚರಿಸುವಂತೆ ಸೂಚಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago