ಉಡುಪಿ : ಕಾರೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ವರ್ಷದ ಯುವಕ ಸಾವನ್ನಪ್ಪಿದ ಘಟನೆ ಆಗಸ್ಟ್ 3 ರ ಸೋಮವಾರ ಕುಂಬ್ರಗೋಡು ಎಂಬಲ್ಲಿ ನಡೆದಿದೆ.
ಮೃತ ಯುವಕನನ್ನು ಆಕಾಶ್ ಪೂಜಾರಿ (21) ಎಂದು ಗುರುತಿಸಲಾಗಿದ್ದು ಕುಂಬ್ರಗೋಡು ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದರು.
ಕುಂದಾಪುರ-ಉಡುಪಿ ಹೆದ್ದಾರಿಯಲ್ಲಿ ರಸ್ತೆ ಬದಿಯಲ್ಲಿ ನಿಂತು ಆಕಾಶ್ ಮತ್ತು ಶರತ್ ಎಂಬವರು ಮಾತನಾಡುತ್ತಿದ್ದರು ಎಂದು ಹೇಳಲಾಗಿದ್ದು ಈ ಸಂದರ್ಭದಲ್ಲಿ ಉಡುಪಿಯಿಂದ ಕುಂದಾಪುರ ಕಡೆಗೆ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಡಿಜೈರ್ ಕಾರು ಡಿವೈಡರ್‌ಗೆ ಗುದ್ದಿ ಪಲ್ಟಿ ಹೊಡೆದಿದ್ದು ಆಕಾಶ್‌ಗೆ ಡಿಕ್ಕಿ ಹೊಡೆದಿದೆ. ಶರತ್‌ನನ್ನು ಬ್ರಹ್ಮಾವರದ ಮಹೇಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರೀತಮ್ ಎಂಬ ವ್ಯಕ್ತಿ ಕಾರು ಚಲಾಯಿಸುತ್ತಿದ್ದರು ಎಂದು ತಿಳಿದು ಬಂದಿದೆ.ಆಕಾಶ್ ಅನ್ನು ಕೂಡಾ ಮಹೇಶ್ ಆಸ್ಪತ್ರೆಗೆ ಕರೆತರಲಾಗಿದ್ದು ವೈದ್ಯರು ಈಗಾಗಲೇ ಆಕಾಶ್ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…