ಉಡುಪಿ: ಕಾರು ಢಿಕ್ಕಿ ; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು – vishwanews24
ಉಡುಪಿ: ಕಾರಿನ ಬ್ರೇಕ್ ಫೇಲ್; ಯುವಕ ಸ್ಥಳದಲ್ಲೇ ಮೃತ್ಯು
ಉಡುಪಿ: ಕಾರು ಢಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದ್ರಾಳಿಯಲ್ಲಿ ಬುಧವಾರ(ಅ9) ನಡೆದಿದೆ..
ಮೃತ ದುರ್ದೈವಿ ಮಣಿಪಾಲದ ಉದ್ಯೋಗಿ ದೀಪೇಶ್ ದೇವಾಡಿಗ ಎಂದು ಗುರುತಿಸಲಾಗಿದೆ. ಇಂದ್ರಾಳಿ ದೇವಸ್ಥಾನದಿಂದ ಕಾರು ಕೆಳಗೆ ಬರುತ್ತಿದ್ದ ವೇಳೆ ಬ್ರೇಕ್ ಫೇಲ್ ಆಗಿದ್ದು, ಎರಡೂ ಬದಿಯಲ್ಲಿದ್ದ ವಾಹನಗಳು ಸಹಿತ ಪಾದಚಾರಿಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಹಲವರಿಗೆ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
