ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಿ, ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇ.ಮಣಿವಣ್ಣನ್ ಸೂಚಿಸಿದರು.
ಅವರು ಶುಕ್ರವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡುವ ಕುರಿತಂತೆ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯಿರಿ, ಎಲ್ಲಾ ಬಸ್‌ಗಳಲ್ಲಿ ನೊಂದಾಯಿತ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಫಲಕಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರ ನೀಡಿ, ಕಾರ್ಮಿಕ ಸಹಾಯವಾಣಿ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿ, ಜಿಲ್ಲೆಯ ಎಲ್ಲಾ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ವಿವಿಧ ಹೊಸ ಯೋಜನೆಗಳನ್ನು ಕೈಗೊಳ್ಳುವ ಕುರಿತಂತೆ ಸಂಬAದಪಟ್ಟ ಇಲಾಖೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಮಣಿವಣ್ಣನ್, ಜಿಲ್ಲೆಯ ತೋಟಗಾರಿಕಾ ಇಲಾಖೆಯಿಂದ ರಫ್ತು ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಆಹಾರ ಸಂಸ್ಕರಣಾ ಉದ್ದಿಮೆಗಳ ಆರಂಭ ಕುರಿತಂತೆ ಮತ್ತು ಸರ್ಕಾರದಿಂದ ಲಭ್ಯವಿರುವ ವಿವಿಧ ಯೋಜನೆ ಮತ್ತು ಸಹಾಯಧನದ ರೈತರಿಗೆ ಮಾಹಿತಿ ನೀಡಿ ಎಂದರು.
ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಕುರಿತಂತೆ, ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ತಿಳಿಸಿದ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ,ಆದಷ್ಟು ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಾನಿಗೊಳಗಾದ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ನಿರ್ದೇಶನ ನೀಡಿದ ಅವರು, ಈಗಾಗಲೇ ಪರಿಹಾರ ವಿತರಿಸಿರುವ ಸಂತ್ರಸ್ಥರ ಸಂಪೂರ್ಣ ವಿವರಗಳನ್ನು ನೀಡುವಂತೆ ತಿಳಿಸಿದರು.
ಜಿಲ್ಲೆಯಿಂದ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿ, ಅನುಮೋದನೆಗೆ ಬಾಕಿ ಇರುವ ಕಡತಗಳ ಕುರಿತು ವಿವರಗಳನ್ನು ನೀಡಿ, ಇವುಗಳ ಶೀಘ್ರ ಮಂಜೂರಾತಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಕುರಿತ ಪರಿಶೀಲಿಸಿದ ಅವರು, , ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲು ಮಾಡಿ, ಹೊಂ ಐಸೋಲೇಷನ್ ನಲ್ಲಿ ದಾಖಲಿಸುವಾಗ, ಮನೆಯಲ್ಲಿ ರೋಗಿಗಳಿಗೆ ಪ್ರತ್ಯೇಕವಾಗಿ ಇರಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸಿ ಎಂದರು.
ಈಗಾಗಲೇ ಹೆಬ್ರಿಯ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ ಗೋಶಾಲೆ ನಿರ್ಮಿಸಲು ಜಮೀನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಇಲ್ಲಿ ಉತ್ತಮ ರೀತಿಯಲ್ಲಿ ಮಾದರಿ ಗೋಶಾಲೆ ನಿರ್ಮಿಸಿ ಹಾಗೂ ಗೋವುಗಳ ಆರೈಕೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳು ಇರುವಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಮಾಡಲು ಕ್ರಮ ಕೈಗೊಳ್ಳಿ, ಹಸಿ ಕಸದಿಂದ ಕಾಂಪೋಸ್ಟ್ ಮತ್ತು ಒಣಕಸವನ್ನು ಮರು ಬಳಕೆ ಮಾಡುವ ಕಾರ್ಯ ನಡೆಯಬೇಕು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆ ಎಸ್ಪಿ ,ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…