Featured

ಉಡುಪಿ : ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿ :  ಮೇಜರ್ ಮಣಿವಣ್ಣನ್ -Vishwanews24

ಉಡುಪಿ : ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡಿ :  ಮೇಜರ್ ಮಣಿವಣ್ಣನ್ -Vishwanews24

ಉಡುಪಿ : ಜಿಲ್ಲೆಯಲ್ಲಿರುವ ಎಲ್ಲಾ ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಡ್ಡಾಯವಾಗಿ ನೊಂದಣಿ ಮಾಡಿಸಿ, ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ತಲುಪುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೇ.ಮಣಿವಣ್ಣನ್ ಸೂಚಿಸಿದರು.

ಅವರು ಶುಕ್ರವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಮಿಕರನ್ನು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೊಂದಣಿ ಮಾಡುವ ಕುರಿತಂತೆ ಸ್ವಯಂ ಸೇವಾ ಸಂಘಟನೆಗಳ ಸಹಕಾರ ಪಡೆಯಿರಿ, ಎಲ್ಲಾ ಬಸ್‌ಗಳಲ್ಲಿ ನೊಂದಾಯಿತ ಕಾರ್ಮಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಫಲಕಗಳನ್ನು ಅಳವಡಿಸಿ, ವ್ಯಾಪಕ ಪ್ರಚಾರ ನೀಡಿ, ಕಾರ್ಮಿಕ ಸಹಾಯವಾಣಿ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿ, ಜಿಲ್ಲೆಯ ಎಲ್ಲಾ ಕಾರ್ಮಿಕರು ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ವಿವಿಧ ಹೊಸ ಯೋಜನೆಗಳನ್ನು ಕೈಗೊಳ್ಳುವ ಕುರಿತಂತೆ ಸಂಬAದಪಟ್ಟ ಇಲಾಖೆಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದ ಮಣಿವಣ್ಣನ್, ಜಿಲ್ಲೆಯ ತೋಟಗಾರಿಕಾ ಇಲಾಖೆಯಿಂದ ರಫ್ತು ಆಧಾರಿತ ಚಟುವಟಿಕೆಗಳನ್ನು ಕೈಗೊಳ್ಳುವಂತೆ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ, ಆಹಾರ ಸಂಸ್ಕರಣಾ ಉದ್ದಿಮೆಗಳ ಆರಂಭ ಕುರಿತಂತೆ ಮತ್ತು ಸರ್ಕಾರದಿಂದ ಲಭ್ಯವಿರುವ ವಿವಿಧ ಯೋಜನೆ ಮತ್ತು ಸಹಾಯಧನದ ರೈತರಿಗೆ ಮಾಹಿತಿ ನೀಡಿ ಎಂದರು.

ಉಡುಪಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆ ಕುರಿತಂತೆ, ಸರ್ಕಾರದ ಮಟ್ಟದಲ್ಲಿ ಚರ್ಚಿಸುವುದಾಗಿ ತಿಳಿಸಿದ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿ,ಆದಷ್ಟು ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.

ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಾನಿಗೊಳಗಾದ ಸಂತ್ರಸ್ಥರಿಗೆ ತಕ್ಷಣದಲ್ಲಿ ಪರಿಹಾರ ನೀಡುವಂತೆ ಎಲ್ಲಾ ತಹಸೀಲ್ದಾರ್ ಗಳಿಗೆ ನಿರ್ದೇಶನ ನೀಡಿದ ಅವರು, ಈಗಾಗಲೇ ಪರಿಹಾರ ವಿತರಿಸಿರುವ ಸಂತ್ರಸ್ಥರ ಸಂಪೂರ್ಣ ವಿವರಗಳನ್ನು ನೀಡುವಂತೆ ತಿಳಿಸಿದರು.

ಜಿಲ್ಲೆಯಿಂದ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿ, ಅನುಮೋದನೆಗೆ ಬಾಕಿ ಇರುವ ಕಡತಗಳ ಕುರಿತು ವಿವರಗಳನ್ನು ನೀಡಿ, ಇವುಗಳ ಶೀಘ್ರ ಮಂಜೂರಾತಿಗೆ ಪ್ರಯತ್ನಿಸುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ಪರಿಸ್ಥಿತಿ ಕುರಿತ ಪರಿಶೀಲಿಸಿದ ಅವರು, , ಕೋವಿಡ್ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲು ಮಾಡಿ, ಹೊಂ ಐಸೋಲೇಷನ್ ನಲ್ಲಿ ದಾಖಲಿಸುವಾಗ, ಮನೆಯಲ್ಲಿ ರೋಗಿಗಳಿಗೆ ಪ್ರತ್ಯೇಕವಾಗಿ ಇರಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸಿ ಎಂದರು.

ಈಗಾಗಲೇ ಹೆಬ್ರಿಯ ತಾಲೂಕಿನ ಕೆರೆಬೆಟ್ಟು ಗ್ರಾಮದಲ್ಲಿ ಗೋಶಾಲೆ ನಿರ್ಮಿಸಲು ಜಮೀನು ಗುರುತಿಸಲಾಗಿದ್ದು, ಶೀಘ್ರದಲ್ಲಿ ಇಲ್ಲಿ ಉತ್ತಮ ರೀತಿಯಲ್ಲಿ ಮಾದರಿ ಗೋಶಾಲೆ ನಿರ್ಮಿಸಿ ಹಾಗೂ ಗೋವುಗಳ ಆರೈಕೆಗೆ ಅಗತ್ಯವಿರುವ ಎಲ್ಲಾ ಸೌಕರ್ಯಗಳು ಇರುವಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಿ ಎಂದು ಪಶುಪಾಲನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ವೈಜ್ಞಾನಿಕ ರೀತಿಯಲ್ಲಿ ತ್ಯಾಜ್ಯ ಸಂಸ್ಕರಣೆ ಮಾಡಲು ಮಾಡಲು ಕ್ರಮ ಕೈಗೊಳ್ಳಿ, ಹಸಿ ಕಸದಿಂದ ಕಾಂಪೋಸ್ಟ್ ಮತ್ತು ಒಣಕಸವನ್ನು ಮರು ಬಳಕೆ ಮಾಡುವ ಕಾರ್ಯ ನಡೆಯಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲು ಪಡೆ ಎಸ್ಪಿ ,ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ್ ರೆಡ್ಡಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

23 seconds ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 days ago