ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.
ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು. ಈ ಹೇಳಿಕೆ ಚುನಾವಣಾ ನೀತಿ ಸಂಹಿತೆಗೆ ವಿರುದ್ದ ಎಂದು ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಇತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಆ ಕುರಿತ ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ) ವಿಚಾರಣ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್. ಗೋಪಾಲಕೃಷ್ಣ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ಅರ್ಜಿದಾರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಅಲ್ಲದೆ, ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣ ಸಂಚಾರ ವಿಚಕ್ಷಣ ಅಧಿಕಾರಿಯಾಗಿದ್ದ ವಿಶ್ವನಾಥ್ ಶೆಟ್ಟಿ ಅವರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ಹಾಜರಾಗಿ, ಪ್ರಕರಣ ಸಂಬಂಧ ಚುನಾವಣ ಸಂಚಾರ ವಿಚಕ್ಷಣ ಅಧಿಕಾರಿಯು ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್ 188 ದೂರು ದಾಖಲಿಸಿದ್ದರು. ಈ ವಿಚಾರವಾಗಿ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ವಿಚಕ್ಷಣ ಅಧಿಕಾರಿ ಹೊಂದಿಲ್ಲ. ದೂರು ದಾಖಲಿಸುವಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿದ್ದರು. ಈ ವಾದ ಒಪ್ಪಿದ ನ್ಯಾಯಪೀಠ ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿತು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…