Featured

ಉಡುಪಿ : ಕಾಲೇಜಿನಲ್ಲಿ ಚುನಾವಣಾ ಭಾಷಣ : ಸಂಸದ ಕೋಟ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆ – vishwanews24

ಉಡುಪಿ : ಕಾಲೇಜಿನಲ್ಲಿ ಚುನಾವಣಾ ಭಾಷಣ : ಸಂಸದ ಕೋಟ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆ

ಉಡುಪಿ : ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯ ವಿರುದ್ಧದ ಪ್ರಕರಣವೊಂದಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ.

ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಉಡುಪಿ ಜಿಲ್ಲೆಯ ಕಟಪಾಡಿಯಲ್ಲಿನ ಖಾಸಗಿ ಕಾಲೇಜೊಂದರ ಆವರಣದಲ್ಲಿ ಕಾರ್ಯಕ್ರಮ ನಡೆಸಿ “ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಮಕ್ಕಳಿಗೆ ಹಲವು ಉಚಿತ ಯೋಜನೆ ಜಾರಿಗೊಳಿಸುವುದಾಗಿ ಹೇಳಿದ್ದರು. ಈ ಹೇಳಿಕೆ ಚುನಾವಣಾ ನೀತಿ ಸಂಹಿತೆಗೆ ವಿರುದ್ದ ಎಂದು ಕೋಟ ಶ್ರೀನಿವಾಸ್‌ ಪೂಜಾರಿ ಮತ್ತು ಇತರ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ದಾಖಲಾಗಿರುವ ಈ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಆ ಕುರಿತ ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ) ವಿಚಾರಣ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌ ಹಾಗೂ ಖಾಸಗಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್‌. ಗೋಪಾಲಕೃಷ್ಣ ಸಲ್ಲಿಸಿದ ಅರ್ಜಿಯು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು. ಅಲ್ಲದೆ, ಪ್ರಕರಣದಲ್ಲಿ ದೂರುದಾರರಾಗಿರುವ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣ ಸಂಚಾರ ವಿಚಕ್ಷಣ ಅಧಿಕಾರಿಯಾಗಿದ್ದ ವಿಶ್ವನಾಥ್‌ ಶೆಟ್ಟಿ ಅವರಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆ ಮುಂದೂಡಿತು.ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ. ಅರುಣ್‌ ಶ್ಯಾಮ್‌ ಹಾಜರಾಗಿ, ಪ್ರಕರಣ ಸಂಬಂಧ ಚುನಾವಣ ಸಂಚಾರ ವಿಚಕ್ಷಣ ಅಧಿಕಾರಿಯು ಅರ್ಜಿದಾರರ ವಿರುದ್ಧ ಐಪಿಸಿ ಸೆಕ್ಷನ್‌ 188 ದೂರು ದಾಖಲಿಸಿದ್ದರು. ಈ ವಿಚಾರವಾಗಿ ದೂರು ದಾಖಲಿಸುವ ಅಧಿಕಾರ ವ್ಯಾಪ್ತಿಯನ್ನು ವಿಚಕ್ಷಣ ಅಧಿಕಾರಿ ಹೊಂದಿಲ್ಲ. ದೂರು ದಾಖಲಿಸುವಲ್ಲಿ ಕಾನೂನು ಉಲ್ಲಂಘನೆಯಾಗಿದ್ದು, ಖಾಸಗಿ ದೂರನ್ನು ರದ್ದುಪಡಿಸಬೇಕು ಎಂದು ಕೋರಿದ್ದರು. ಈ ವಾದ ಒಪ್ಪಿದ ನ್ಯಾಯಪೀಠ ಪ್ರಕರಣಕ್ಕೆ ತಡೆ ನೀಡಿ ಆದೇಶಿಸಿತು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

16 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago