Featured

ಉಡುಪಿ ಕಾಲೇಜು ವಿಡಿಯೋ ಪ್ರಕರಣ : ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಗೆ ಜಾಮೀನು – Vishwanews24

ಉಡುಪಿ ಕಾಲೇಜು ವಿಡಿಯೋ ಪ್ರಕರಣ : ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಗೆ ಜಾಮೀನು

ಉಡುಪಿ: ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣವನ್ನು ಖಂಡಿಸಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ತು ಮುಖಂಡ ಶರಣ್ ಪಂಪ್ ವೆಲ್ ಅವರಿಗೆ ಜಾಮೀನು ಮಂಜೂರಾಗಿದೆ.

ಪ್ಯಾರಾ ಮೆಡಿಕಲ್‌ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ಸಮುದಾಯದ ಮೂವರು ವಿದ್ಯಾರ್ಥಿನಿಯರು ಓರ್ವ ಹಿಂದೂ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಮಾಡಿದ್ದಾರೆ ಎನ್ನಲಾದ ಪ್ರಕರಣವನ್ನು ಖಂಡಿಸಿ ಆ. 3 ರಂದು ಉಡುಪಿಯಲ್ಲಿ ವಿಶ್ವ ಹಿಂದೂ ಪರಿಷತ್‌ – ಬಜರಂಗ ದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಶರಣ್‌ ಪಂಪ್‌ ವೆಲ್‌ ‘ತಾಯಿಯಂದಿರು ಸೌಟು ಹಿಡಿಯುವ ಕೈಯಲ್ಲಿ ಕತ್ತಿ, ತಲಾವಾರು ಹಿಡಿಯ ಬೇಕು’ ಎಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ಈ ಪ್ರಕರಣದಲ್ಲಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

21 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

22 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

22 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

23 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

24 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

24 hours ago