ಉಡುಪಿ: ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ ಮತ್ತು ದಿಟ್ಟತನ ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ಮಾದರಿಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಪುಷ್ಪಾರ್ಚನೆಮಾಡಿ ಮಾತನಾಡಿದರು.
ಸಮಾಜದ ಒಳಿತಿಗಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮನ ತ್ಯಾಗ ಬಲಿದಾನವನ್ನು ಶ್ಲಾಘನೆ ಮಾಡುವ ಮೂಲಕ ಮಕ್ಕಳಲ್ಲಿ ಸಾಧನೆಯ ಛಲವನ್ನು ತುಂಬುಬೇಕು ಎಂದರು. ಚಿತ್ರಕಲಾ ಮಂದಿರದ ನಿರಂಜನ್ ಮಾತನಾಡಿ ಕಿತ್ತೂರು ರಾಣಿ ಚೆನ್ನಮ್ಮ ಎಂದರೆ ಕಿರಿಯರಿಂದ ಹಿರಿಯರಿಗೆ ಸಂಚಲನ
ಮೂಡಿಸುವಂತ ಅಪ್ರತಿಮ ವೀರ ಮಹಿಳೆ, ಕರ್ನಾಟಕದ ಹೆಮ್ಮೆ ಎಂದರು.
ಜಿಲ್ಲಾ ಪಂಚಾಯತ್ ನ ಉಪಕಾರ್ಯದರ್ಶಿ ಕಿರಣ ಪಡ್ನೇಕರ್, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್, ಉಡುಪಿ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಖಜಾಂಚಿ ಉಮಾಪತಿ, ಬಿ.ಸಿ.ಎಂ.ಇಲಾಖೆಯ ಉಪನಿರ್ದೇಶಕ ಜಗದೀಶ್ ಶೆಟ್ಟರ್, ಬಸವ ಸಮಿತಿ ಕಾರ್ಯದರ್ಶಿ ಸುರೇಶ್ , ಪಶುಸಂಗೋಪನೆ ಇಲಾಖೆಯ ಅಧಿಕಾರಿ ಡಾ. ಪ್ರಶಾಂತ್ ಶೆಟ್ಟಿ , ಚಿತ್ರಕಲಾ ಮಂದಿರದ ಸದಸ್ಯರುಗಳಾದ ಮನೋಜ್, ಗೌತಮ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…