ಉಡುಪಿ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ ಹಾಗೂ ಕೆ-ಸಿಇಟಿ ಪರೀಕ್ಷೆಗೆ ತರಬೇತಿ -Vishwanews24
ಉಡುಪಿ : ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗೆ ಸಂದರ್ಶನ ಹಾಗೂ ಕೆ-ಸಿಇಟಿ ಪರೀಕ್ಷೆಗೆ ತರಬೇತಿ -Vishwanews24
ಉಡುಪಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶದವರೆಗೆ ಮಾಸಿಕ 15,000 ರೂ, ವೇತನದಂತೆ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು, ಜುಲೈ 13 ರಂದು ಬೆಳಗ್ಗೆ 10.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿ ಹೊಂದಿ, ರಾಜ್ಯ ನರ್ಸಿಂಗ್ ಕೌನ್ಸಿಲ್ನಲ್ಲಿ ನೋಂದಣಿ ಆದಂತಹ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0820-2536650/ 2525566 ಅನ್ನು ಸಂಪರ್ಕಿಸುವoತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ-ಸಿಇಟಿ ಪರೀಕ್ಷೆಗೆ ತರಬೇತಿ
ಉಡುಪಿ : ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದೆ.
ಆಸಕ್ತರು ಜುಲೈ 17 ರ ಒಳಗೆ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮುಕ್ತಗಂಗೋತ್ರಿ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯೊಳಗೆ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸುವoತೆ ಮುಕ್ತ ವಿವಿ ಕುಲಸಚಿವ ಪ್ರೊ. ಆರ್. ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
