Featured

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ

ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ ವತಿಯಿಂದ ಈ ವರ್ಷದ ನವೆಂಬರ್ ತಿಂಗಳಿನಿಂದ ‘ಆದಿ ಮಾಯೆ ಮೂಕಾಂಬಿಕಾ–ಸ್ವಾಮಿ ಕೊರಗಜ್ಜ ಕೃಪಾಪೋಷಿತ ಯಕ್ಷಗಾನ ಮಂಡಳಿ’ ಆರಂಭಗೊಳ್ಳಲಿದೆ ಎಂದು ಮೇಳದ ಯಜಮಾನ ಡಾ. ಕೆ. ಕೃಷ್ಣ ಕುಲಾಲ್ ತಿಳಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಮಾರು 200 ವರ್ಷಗಳ ಇತಿಹಾಸ ಹೊಂದಿರುವ ಈ ಕ್ಷೇತ್ರವನ್ನು ಪ್ರಶ್ನಾ ಚಿಂತನೆಯ ಆಧಾರದಲ್ಲಿ 2019ರಲ್ಲಿ ಜೀರ್ಣೋದ್ಧಾರ ಹಾಗೂ ಪುನಃ ಪ್ರತಿಷ್ಠಾಪನೆ ಮಾಡಲಾಗಿದೆ.

ಕಳೆದ ಏಳು ವರ್ಷಗಳಿಂದ ಲಕ್ಷಾಂತರ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ತಮ್ಮ ಹರಕೆಗಳನ್ನು ಸಲ್ಲಿಸುತ್ತಿದ್ದು, ಕ್ಷೇತ್ರವು ಭಕ್ತರ ನಂಬಿಕೆಯ ಕೇಂದ್ರವಾಗಿ ಬೆಳೆದಿದೆ ಎಂದು ಹೇಳಿದರು.

ಆದಿ ಮಾಯೆ ಮೂಕಾಂಬಿಕಾ ದೇವಿ ಹಾಗೂ ಸ್ವಾಮಿ ಕೊರಗಜ್ಜ ದೈವದ ಅಪ್ಪಣೆಯಂತೆ ಆರಂಭವಾಗುತ್ತಿರುವ ಈ ಯಕ್ಷಗಾನ ಮೇಳದಲ್ಲಿ ತೆಂಕುತಿಟ್ಟು ಮತ್ತು ಬಡಗುತಿಟ್ಟಿನ ಸಮ್ಮಿಲನ ಇರಲಿದೆ. ನುರಿತ ಹಾಗೂ ಅನುಭವಿ ಕಲಾವಿದರು, ಹೊಸ ವೇಷಭೂಷಣ, ಆಕರ್ಷಕ ರಂಗಸಜ್ಜಿಕೆ, ಪ್ರಸಿದ್ಧ ಹಿಮ್ಮೇಳದೊಂದಿಗೆ ಕ್ಷೇತ್ರದ ಮಹಿಮೆಯನ್ನು ಸಾರುವ ಪ್ರಸಂಗಗಳ ಜತೆಗೆ ಪೌರಾಣಿಕ ಹಾಗೂ ಸಾಮಾಜಿಕ ಕಥಾ ಪ್ರಸಂಗಗಳನ್ನು ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

ಕ್ಷೇತ್ರದ ಭಕ್ತರು ಹಾಗೂ ಯಕ್ಷಗಾನ ಕಲಾಪ್ರೇಮಿಗಳು ತಮ್ಮ ಊರುಗಳಲ್ಲಿ ಮೇಳದ ಪ್ರದರ್ಶನಗಳನ್ನು ಆಯೋಜಿಸಿ, ಕಲಾವಿದರನ್ನು ಪ್ರೋತ್ಸಾಹಿಸಿ ಮೇಳವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

5 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

5 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

6 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

6 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

9 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

10 hours ago