Featured

ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಉಡುಪಿ : ಕುಟುಂಬ ಗುರುತಿನ ಚೀಟಿ ತಂತ್ರಾ0ಶದಲ್ಲಿ ಅಂಗವಿಕಲರ ನೋಂದಣಿಗೆ ಸೂಚನೆ -Vishwanews24

ಉಡುಪಿ: ಕುಟುಂಬ ಗುರುತಿನ ಸಂಖ್ಯೆ ಯೋಜನೆಗಾಗಿ ವಿಕಲಚೇತನರ ಮಾಹಿತಿಯನ್ನು ಇ-ಆಡಳಿತ ಇಲಾಖೆಯ ಹೊಸದಾದ ತಂತ್ರಾ0ಶದಲ್ಲಿ ದತ್ತಾಂಶವನ್ನು ಅಳವಡಿಸಲು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಯವರ ಕಛೇರಿ ಮತ್ತು ಆಯಾ ತಾಲೂಕು ಮಟ್ಟದಲ್ಲಿ ವಿವಿಧೋದ್ದೇಶ ಪುನವರ್ಸತಿ ಕಾರ್ಯಕರ್ತರು(ಎಮ್.ಆರ್.ಡಬ್ಲೂ) ಹಾಗೂ ಗ್ರಾಮ ಮಟ್ಟದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಂದ (ವಿ.ಆರ್.ಡಬ್ಲೂ) ಈಗಾಗಲೇ ಕಾರ್ಯ ಪ್ರಾರಂಭವಾಗಿದ್ದು, ಫಲಾನುಭವಿಗಳು ಅವಶ್ಯಕ ದಾಖಲಾತಿಗಳೊಂದಿಗೆ ಎಮ್.ಆರ್.ಡಬ್ಲೂ ಹಾಗೂ ವಿ.ಆರ್.ಡಬ್ಲೂ ರವರಿಗೆ ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಳ್ಳಬೇಕು.

ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಿಕಲಚೇತನರ ಗುರುತಿನ ಚೀಟಿ (ಹಳೆ ಪುಸ್ತಕದ ಸಂಖ್ಯೆ ಹಾಗೂ ಯುಡಿಐಡಿಗೆ ಸಲ್ಲಿಸಿದ ಅರ್ಜಿ ಸಂಖ್ಯೆ) ಅಥವಾ ಯುಡಿಐಡಿ ಕಾರ್ಡ್ ಸಂಖ್ಯೆ, ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಂಖ್ಯೆ, ಇಲಾಖೆ ಹಾಗೂ ಇತರೆ ಇಲಾಖೆಯಿಂದ ಪಡೆದ ಸೌಲಭ್ಯಗಳ ವಿವರಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ 0820-2574810/811, ವಿವಿಧೋದ್ದೇಶ ಪುನವರ್ಸತಿ ಕಾರ್ಯಕರ್ತರು(ಎಮ್.ಆರ್.ಡಬ್ಲೂ) ಉಡುಪಿ ಮೊ: 9449334270, ಕುಂದಾಪುರ ಮೊ: 9901824878, ಕಾರ್ಕಳ ಮೊ: 9481145518 ಹಾಗೂ ಆಯಾ ಗ್ರಾಮ ಪಂಚಾಯತ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು (ವಿ.ಆರ್.ಡಬ್ಲೂ) ಸಂಪರ್ಕಿಸಬಹುದು.

2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 16,922 ಅಂಗವಿಕಲರು ಇದ್ದು, ಜಿಲ್ಲೆಯಲ್ಲಿ ಇನ್ನೂ ಹಲವರು ಸದರಿ ತಂತ್ರಾ0ಶದಲ್ಲಿ ಮಾಹಿತಿಯನ್ನು ಅಳವಡಿಸದೇ ಇರುವ ಹಿನ್ನೆಲೆಯಲ್ಲಿ ಅವರಿಗೆ ಸಿಗಬೇಕಾದ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಡಚಣೆ ಉಂಟಾಗಿರುವುದರಿ0ದ ಸದರಿ ಯೋಜನೆಯಲ್ಲಿ ವಿಕಲಚೇತನರು ಸರಿಯಾದ ಮಾಹಿತಿ ನೀಡಿ ನಮೂದಿಸಿಕೊಂಡು ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago