ಉಡುಪಿ: : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ –  ಓರ್ವನ ಕೊಲೆಯಲ್ಲಿ ಅಂತ್ಯ – Vishwanews24

Featured, ಉಡುಪಿ

ಉಡುಪಿ: : ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ –  ಓರ್ವನ ಕೊಲೆಯಲ್ಲಿ ಅಂತ್ಯ

ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ

ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕುಡಿದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದ್ದು ಬಾರ್ ನಿಂದ ಹೊರಗಡೆ ಬಂದ ದಯಾನಂದ ಮತ್ತು ಭರತ್ ಪರಸ್ಪರ ಜಗಳ ಮಾಡಿಕೊಂಡಿದ್ದು ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ – Vishwanews24

ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ನಾಪತ್ತೆಯಾಗಿದ್ದು ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಉಡುಪಿ ಎಸ್‌ ಐ ಹಾಕೆ ಅಕ್ಷಯ್ ಮಚ್ಚಿಂದ್ರ, ಕಾಪು ಡಿವೈಎಸ್‌ ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಎಸ್‌ ಐ ಸುಮಾ.ಬಿ, ಕ್ರೈಮ್‌ ಎಸ್‌ ಐ ಭರತೇಶ್‌ ಕಂಕನವಾಡಿ ಸಹಿತ ಪೊಲೀಸರು ಅಧಿಕಾರಿಗಳು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ.

ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ – Vishwanews24

Leave a Reply