ಉಡುಪಿ: ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಈ ಸಂಬಂಧ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ
ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕುಡಿದ ನಶೆಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದಿದ್ದು ಬಾರ್ ನಿಂದ ಹೊರಗಡೆ ಬಂದ ದಯಾನಂದ ಮತ್ತು ಭರತ್ ಪರಸ್ಪರ ಜಗಳ ಮಾಡಿಕೊಂಡಿದ್ದು ಈ ವೇಳೆ ಭರತ್ ತನ್ನ ಕೈ ಬೆರಳಿನಲ್ಲಿ ಇದ್ದ ಕಬ್ಬಿಣದ ಪಂಚ್ ನಿಂದ ದಯಾನಂದ ಮುಖ ಹಾಗೂ ಕೆನ್ನೆಯ ಭಾಗಕ್ಕೆ ಬಲವಾಗಿ ಜಜ್ಜಿ ಬಳಿಕ ತಲೆಗೆ ಹೊಡೆದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ದಯಾನಂದನನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾನೆ.
ಹಲ್ಲೆ ನಡೆಸಿದ ಭರತ್ ಘಟನೆಯ ಅನಂತರ ಸ್ಥಳದಿಂದ ನಾಪತ್ತೆಯಾಗಿದ್ದು ಸ್ಥಳೀಯರ ಸಹಕಾರದಿಂದ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಉಡುಪಿ ಎಸ್ ಐ ಹಾಕೆ ಅಕ್ಷಯ್ ಮಚ್ಚಿಂದ್ರ, ಕಾಪು ಡಿವೈಎಸ್ ಪಿ ಅರವಿಂದ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆಸಿ ಪೂವಯ್ಯ, ಕಾಪು ಎಸ್ ಐ ಸುಮಾ.ಬಿ, ಕ್ರೈಮ್ ಎಸ್ ಐ ಭರತೇಶ್ ಕಂಕನವಾಡಿ ಸಹಿತ ಪೊಲೀಸರು ಅಧಿಕಾರಿಗಳು ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…