Featured

ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ : ಕುಡಿಯುವ ನೀರು ಸಮಸ್ಯೆ ಬಾರದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಉಡುಪಿ  : ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ಕಂಡುಬರದ0ತೆ ಅಧಿಕಾರಿಗಳು ಈಗಿನಿಂದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಅವರು ಮಂಗಳವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಳೆದ ಬಾರಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ಗ್ರಾಮಗಳನ್ನು ಗುರುತಿಸಿ, ಈ ಬಾರಿ ಆ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಕಂಡುಬರದAತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಎಲ್ಲಾ ತಾಲೂಕುಗಳು ತಹಸೀಲ್ದಾರುಗಳು ಮತ್ತು ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಮಟ್ಟದಲ್ಲಿ ಸಭೆಗಳಲ್ಲಿ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಕಂಡು ಬರುವ ಗ್ರಾಮಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತಂತೆ ಸಂಬAದಪಟ್ಟ ಗ್ರಾಮ ಪಂಚಾಯತ್ನ ಪಿಡಿಓ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆಗಳನ್ನು ಸಿದ್ಧ ಮಾಡಿಟ್ಟುಕೊಂಡು, ಸಮಸ್ಯೆ ತಲೆದೋರಿದ ಕೂಡಲೇ ನೀರು ಸರಬರಾಜು ಮಾಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದAತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜಿಲ್ಲೆಯ ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಿ. ಸಾಧ್ಯವಿದ್ದಲ್ಲಿ ಖಾಸಗಿ ಬೋರ್ ವೆಲ್ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ಗಳಿಗೆ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ನಕ್ಷೆ ತಯಾರಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಗ್ರಾಮ ಪಂಚಾಯತ್ಗಳ ವಿಪತ್ತು ನಿರ್ವಹಣಾ ಯೋಜನೆಯಲ್ಲಿ ಅಗತ್ಯವಿರುವ ಗ್ರಾಮ ಪಂಚಾಯತ್ಗಳಿಗೆ ಸುರಕ್ಷತಾ ಉಪಕರಣಗಳನ್ನು ಒದಗಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಕುಂದಾಪುರ ಉಪವಿಭಾಗಾಧಿಕಾರಿ ರಾಜು, ನಗರಾಬಿವೃಧ್ದಿ ಕೋಶದ ಯೋಜನಾ ನಿರ್ದೇಶಕ ಅರುಣಪ್ರಭ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ರವಿ ಓಜನಹಳ್ಳಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

3 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

8 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

24 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

24 hours ago