Featured

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಮನವಿ  – vishwanews24

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ : ನವೀನ್ ಸಾಲಿಯನ್ ಮನವಿ

ಉಡುಪಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ

ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ ಕುಟುಂಬಗಳು ಆ ಭಾಗದಲ್ಲಿ ವಾಸ ಮಾಡಲು ಅನುಮತಿಯಿಲ್ಲದೆ, ಜೀವನೋಪಾಯಕ್ಕೆ ತೀವ್ರ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳಿಗೆ ಪುನರ್ವಸತಿ ಹಾಗೂ ನ್ಯಾಯಯುತ ಪರಿಹಾರದ ಅಗತ್ಯ ಬಹಳ ದಿನಗಳಿಂದಲೂ ಪ್ರಸ್ತಾಪವಾಗುತ್ತಿದ್ದ ಮಹತ್ವದ ವಿಚಾರ.

ಕುದುರೆಮುಖ ಕಬ್ಬಿಣದ ಅದಿರು ಗಣಿಗಾರಿಕೆ ಕಂಪನಿ ಕೆಲಸಕ್ಕಾಗಿ ವಿವಿಧ ಕಡೆಗಳಿಂದ ಹಲವು ಕುಟುಂಬಗಳು ಕುದುರೆಮುಖ ಪ್ರದೇಶಕ್ಕೆ ಬಂದು ಕೆ ಐ ಓ ಸಿ ಎಲ್ ಕಂಪನಿ ಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು,ಆನಂತರದ ದಿನಗಳಲ್ಲಿ ಕಂಪನಿ ಮುಚ್ಚಿ ಹೋಗಿದ್ದು ಇಲ್ಲಿ ದುಡಿಯುತ್ತಿದ್ದ ಹಲವರು ಕುಟುಂಬಗಳು ನಿರೋದ್ಯೋಗಿಗಳಾಗಿ ಹೋಗಿದ್ದಾರೆ.ಸದ್ಯ ಕಳಸ ಶೃಂಗೇರಿ ಕಡೆ ಕಾಪಿ ತೋಟಗಳಲ್ಲಿ ಹಾಗೂ ಉಡುಪಿ ಭಾಗಕ್ಕೆ ಕೃಷಿ ಕಾಮಗಾರಿಗೆ ವಲಸಿ ಕೂಲಿ ಕೆಲಸ ಮಾಡಿಕೊಂಡು ಸ್ವಂತಕ್ಕೆ ಸೂರು ಇಲ್ಲದೆ ಜೀವನ ಸಾಗಿಸುವ ಪರಿಸ್ಥಿತಿ ಎದುರಾಗಿದೆ.

ಕುದುರೆಮುಖ ಪರಿಸರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವುದರಿಂದ ಹಾಗು ಕಸ್ತೂರಿ ರಂಗನ್ ವರದಿ ವಿಚಾರ ಕೂಡ ಇರುವುದು ಆ ಬಾಗದ ಜನರಿಗೆ ಕುದುರೆಮುಖ ಭಾಗದಲ್ಲಿ ವಸತಿಗಾಗಿ ಜಾಗ ನೀಡುವಲ್ಲಿ ಕಾನೂನು ತೊಡಕಾಗಿದೆ.ಈ ಎಲ್ಲಾ ನಿಟ್ಟಿನಲ್ಲಿ ಆ ಭಾಗದಲ್ಲಿ ಇರುವ ನಿರಾಶ್ರಿತರಿಗೆ ಸರ್ಕಾರವೇ ಪುನರ್ವಸತಿ ನೀಡಬೇಕೆಂದು ಹಾಗೂ ಮೂಲಬೂತ ಸೌಕರ್ಯಗಳಿಲ್ಲದೆ ಜನರು ಎದುರಿಸುತ್ತಿರುವ ದೀರ್ಘಕಾಲದ ನೋವಿಗೆ ಸಕಾರಾತ್ಮಕ ಪರಿಹಾರ ದೊರಕುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಮುಖಂಡರಾದ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago