ಉಡುಪಿ: ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಾಟಲಿಯ ಬಳಕೆಯನ್ನು ಮೇ 01 ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು ತನಿಖಾ ಠಾಣೆ, ಬಸ್ರಿಕಲ್ಲು ತನಿಖಾ ಠಾಣೆ ಹಾಗೂ ತನಿಕೋಡು ತನಿಖಾ ಠಾಣೆಯಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಪ್ರವಾಸಿಗರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಲಭ್ಯ ನೀರನ್ನು ಅಲ್ಲಿಯೇ ಕುಡಿಯಬಹುದಾಗಿದೆ.
ಪ್ರವಾಸಿಗರು ಯಾವುದೇ ಪ್ಲಾಸ್ಟಿಕ್ ಬಾಟಲಿ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇದಿಸಲಾಗಿದ್ದು, ವಾಹನದಲ್ಲಿ ಇರುವ ಯಾವುದೇ ಪ್ಲಾಸ್ಟಿಕ್ ಬಾಟಲಿಗಳನ್ನು ತನಿಖಾ ಠಾಣೆಯಲ್ಲಿ ನಿರ್ಮಿಸಲಾಗಿರುವ ಪ್ಯಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಹಾಕಿ ಪ್ರಯಾಣವನ್ನು ಮುಂದುವರೆಸಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ
ಪ್ರಕಟಣೆ ತಿಳಿಸಿದೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…